ಬಳ್ಳಾರಿ: ‘ಊರು– ಕೇರಿ, ಸಮಾಜ ಎಂದು ಬದುಕಿ, ಹುಟ್ಟು ಸಾವಿನ ನಡುವೆ ಏನಾದರೂ ಸಾಧಿಸಿ ತೋರಿಸುವುದೇ ಜೀವಂತಿಕೆ’ ಎಂದು ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಹೇಳಿದರು.

ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶ್ರೀರಾಮಾಂಜಿನೇಯ ತೊಗಲುಗೊಂಬೆ ಮೇಳ ಟ್ರಸ್ಟ್ ವತಿಯಿಂದ ಭಾನುವಾರ ನಡೆದ ‘ನಾಡೋಜ ಶ್ರೀ ಬೆಳಗಲ್ಲು ವೀರಣ್ಣ ಸ್ಮಾರಕ ಪ್ರಶಸ್ತಿ ಪ್ರದಾನ’ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

‘ಪರಂಪರೆ ಉಳಿಸಿ ಬೆಳೆಸುವ ಮೂಲಕ ಇತಿಹಾಸ ಸೃಷ್ಟಿಸಬೇಕಿದೆ. ಕಲಾವಿದರು ಪ್ರವಾಹದ ವಿರುದ್ಧ ಈಜುವ ಮೀನಿನಂತೆ ಎಲ್ಲಾ ಎಡರು ತೊಡರು ಮೀರಿ ಬೆಳೆಯಬೇಕು’ ಎಂದು ಆಶಿಸಿದರು.

ಕಮ್ಮರಚೇಡು ಮಠದ ಶ್ರೀ ಕಲ್ಯಾಣ ಸ್ವಾಮಿ ಹಾಗೂ ಬಳ್ಳಾರಿಯ ರುದ್ರ ಟ್ರಸ್ಟ್ನ ಅಧ್ಯಕ್ಷ ರವಿಶಂಕರ್ಗುರೂಜಿ ಸಾನ್ನಿಧ್ಯ ವಹಿಸಿದ್ದರು.

ಖ್ಯಾತ ಜಾನಪದ ಗಾಯಕ ಬಾನಂದೂರು ಕೆಂಪಯ್ಯ ಅವರಿಗೆ ಬೆಳಗಲ್ಲು ವೀರಣ್ಣ ಸ್ಮಾರಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಲ್ಲಾಧಿಕಾರಿ ಕೆ. ನಾಗೇಂದ್ರಪ್ರಸಾದ್, ಎಸ್ಪಿ ಸುಮನ್ ಡಿ. ಪೆನ್ನೇಕರ್, ಹಿರಿಯ ರಂಗಭೂಮಿ ಕಲಾವಿದ ಗಾದಿಗನೂರು ಹಾಲಪ್ಪ, ಮೈಸೂರಿನ ವಸ್ತ್ರಾಲಂಕಾರ ಕಲಾವಿದ ಬಿ.ಎಂ. ರಾಮಚಂದ್ರ, ಜಾನಪದ ಅಕಾಡೆಮಿ ಸದಸ್ಯ ಸಿ.ಎನ್. ಮಂಜೇಶ್ ಚನ್ನಾಪುರ, ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಯಲ್ಲನಗೌಡ ಶಂಕರಬಂಡೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್ ಹಾಜರಿದ್ದರು.

ಸಮಾರಂಭ ಬಳಿಕ ಆಂಧ್ರಪ್ರದೇಶದ ಧರ್ಮಾವರಂ ಸತ್ಯಸಾಯಿ ಜಿಲ್ಲೆಯ ಶ್ರೀವನಾರ್ಚ ರಾಮಕೃಷ್ಣ ತೊಗಲುಗೊಂಬೆ ಆಟ ಕಲಾ ತಂಡ ನಿಮ್ಮಲಕುಂಟ ಇವರಿಂದ ಸುಂದರಕಾಂಡ (ಸೀತಾಪಹರಣ) ತೊಗಲುಗೊಂಬೆ ಪ್ರದರ್ಶನ ಗಮನ ಸೆಳೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-25-583328776

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.