ಬಳ್ಳಾರಿ: ‘ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ 112 ವರ್ಷಗಳಿಂದ ಸಾರ್ಥಕ ಸೇವೆ ಸಲ್ಲಿಸುತ್ತಿದ್ದು, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಯನ್ನು ಜೀವಂತವಾಗಿ ಉಳಿಸುವಲ್ಲಿ ಅದರ ಪಾತ್ರ ಅತ್ಯಂತ ಮಹತ್ವದ್ದಾಗಿದೆ’ ಎಂದು ಸನ್ಮಾರ್ಗ ಗೆಳೆಯರ ಬಳಗದ ಅಧ್ಯಕ್ಷ ಎಚ್.ಲಕ್ಷ್ಮಿಕಾಂತ ರೆಡ್ಡಿ ಅಭಿಪ್ರಾಯಪಟ್ಟರು.

ನಗರದ ಸನ್ಮಾರ್ಗ ಗೆಳೆಯರ ಬಳಗದ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿ ದರು. ಕುರುಗೋಡು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ತಿಪ್ಪೇರುದ್ರ ಸಂಡೂರು ಅವರು ‘ಕನ್ನಡ ಸಾಹಿತ್ಯ ಪರಿಷತ್ತಿನ ಸಾಧನೆಯ ಹೆಜ್ಜೆಗಳು’ ಕುರಿತು ವಿಶೇಷ ಉಪನ್ಯಾಸ ನೀಡಿ, ಪರಿಷತ್ತಿನ ಇತಿಹಾಸ ಮತ್ತು ಸಾಧನೆಗಳನ್ನು ವಿವರಿಸಿ ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯ ದರ್ಶಿ ಡಾ.ಶಿವಲಿಂಗಪ್ಪ ಹಂದಿಹಾಳು ಮಾತನಾಡಿ, ‘ಬಳ್ಳಾರಿಗೆ 69 ವರ್ಷಗಳ ಬಳಿಕ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಂಜೂರಾಗಿದ್ದರೂ ಕಾನೂನು ಸಂಬಂಧಿತ ತೊಂದರೆಗಳಿಂದ ವಿಳಂಬವಾಗುತ್ತಿದೆ. ಶೀಘ್ರದಲ್ಲೇ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ರಾಜ್ಯ ಕಾರ್ಯಕಾರಿ ಸಮಿತಿ ಪ್ರಯತ್ನಿಸುತ್ತಿದೆ’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಥೆಗಾರ ವೀರೇಂದ್ರ ರಾವಿಹಾಳ್, ಚಿತ್ರಕಲಾವಿದ ಮಂಜುನಾಥ ಗೋವಿಂದವಾಡ ಇದ್ದರು.

ಈ ಸಂದರ್ಭದಲ್ಲಿ ವರ್ಣಶ್ರೀ ಪ್ರಶಸ್ತಿ ಪುರಸ್ಕೃತ ಚಿತ್ರಕಲಾವಿದ ಎಂ. ರಫೀ, ಆಲಾಪ್ ಸಂಗೀತ ಕಲಾ ಟ್ರಸ್ಟ್ ಅಧ್ಯಕ್ಷ ಬಿ. ರಮಣಪ್ಪ ಹಾಗೂ ವಂದನಾ ಶಾಲೆಯ ಅಧ್ಯಕ್ಷ ಕೆ.ಬಿ. ಈಶ್ವರ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಕ ಹರಿಪ್ರಸಾದ್ ಕಾರ್ಯ ಕ್ರಮ ನಿರೂಪಿಸಿದರು. ಸಂಚಾಲಕ ಕಪ್ಪ ಗಲ್ಲು ಚಂದ್ರಶೇಖರ್ ಆಚಾರ್ ಸ್ವಾಗತಿಸಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-25-319394404

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.