ಭಾಲ್ಕಿ: ‘ಬಸವತತ್ವ ಪ್ರಚಾರ ಮತ್ತು ಪ್ರಸಾರಕ್ಕೆ ನಾಡೋಜ ಬಸವಲಿಂಗ ಪಟ್ಟದ್ದೇವರು ತಮ್ಮ ಬದುಕು ಮೀಸಲಿಟ್ಟಿದ್ದಾರೆ’ ಎಂದು ಕೊಪ್ಪಳದ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಚನ್ನಬಸವಾಶ್ರಮದಲ್ಲಿ ನಡೆದ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರೋಪ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘75 ವಸಂತಗಳನ್ನು ಸಾರ್ಥಕವಾಗಿ ಸಾಗಿಸಿರುವ ಪೂಜ್ಯರ ಸಾಧನೆ ಕೂಡ ಅಷ್ಟೇ ಮೈಲುಗಲ್ಲಾಗಿ ನಿಂತಿವೆ. ಅವರ ದಾಸೋಹ, ಸಮಾಜ ಸೇವೆ ಮಾದರಿಯಾಗಿವೆ. ಅವರು ಶತಾಯಷಿಗಳಾಗಿ ನಮ್ಮೆಲ್ಲರಿಗೂ ಮಾರ್ಗದರ್ಶನ ಮಾಡುತ್ತಿರಲಿ’ ಎಂದು ಹಾರೈಸಿದರು.

ಮುಗುಳಖೋಡ ಜಿಡಗಾ ಶ್ರೀಮಠದ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ಗಡಿಭಾಗದಲ್ಲಿ ಚನ್ನಬಸವ ಪಟ್ಟದ್ದೇವರು ನೆಲೆಸದಿದ್ದರೇ ಈ ಗಡಿಭಾಗ ಶೈಕ್ಷಣಿಕವಾಗಿ ವಂಚಿತವಾಗುತ್ತಿತ್ತು. ಚನ್ನಬಸವ ಪಟ್ಟದ್ದೇವರು ಮಾಡಿರುವ ಸೇವೆಯನ್ನು ಬಸವಲಿಂಗ ಪಟ್ಟದ್ದೇವರು ಬದುಕಿನುದ್ದಕ್ಕೂ ಅನುಸರಿಸಿ ಈ ಭಾಗವನ್ನು ಅಭಿವೃದ್ಧಿ ಪಡಿಸುವ ಕಾರ್ಯ ಮಾಡಿದ್ದಾರೆ’ ಎಂದರು.

ಹಾರಕೂಡ ಮಠದ ಚೆನ್ನವೀರ ಶಿವಾಚಾರ್ಯರು, ಹುಲಸೂರು ಗುರುಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ ಮಾತನಾಡಿದರು.

ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು. ನಿರ್ಗುಡಿ ಹವಾ ಮಲ್ಲಿನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-33-1869555750

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.