ಬೆಂಗಳೂರು: ‘ಕಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ಪ್ರತಿಭಾನ್ವೇಷಣೆ’ ಯೋಜನೆ ಪ್ರಾರಂಭಿಸಲಾಗಿದ್ದು, ಇದರಡಿ ನಡೆಸುವ ಕಲಾ ಸ್ಪರ್ಧೆಗೆ ಜೂನ್ ತಿಂಗಳಲ್ಲಿ ಅರ್ಜಿ ಆಹ್ವಾನಿಸಲಾಗುತ್ತದೆ’ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ. ಕುಮಾರ್ ತಿಳಿಸಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕಾಡೆಮಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಈ ಯೋಜನೆ ಪ್ರಾರಂಭಿಸಲಾಗಿದೆ. ಯೋಜನೆಯಡಿ ಕಳೆದ ಬಾರಿ ನಡೆಸಲಾದ ರಾಜ್ಯ ಮಟ್ಟದ ಕಲಾ ಸ್ಪರ್ಧೆಯಲ್ಲಿ 200ಕ್ಕೂ ಅಧಿಕ ಅರ್ಜಿಗಳು ಸ್ವೀಕೃತವಾಗಿದ್ದವು. ಅವುಗಳಲ್ಲಿ ಗುಣಮಟ್ಟದ ಆಧಾರದ ಮೇಲೆ ತೀರ್ಪುಗಾರರ ನೆರವಿನಿಂದ 30 ವಿದ್ಯಾರ್ಥಿಗಳನ್ನು ಸ್ಪರ್ಧೆಗೆ ಆಯ್ಕೆ ಮಾಡಲಾಗಿತ್ತು. ಅವರಿಗೆ ರಾಜ್ಯಮಟ್ಟದ ಸ್ಪರ್ಧೆ ನಡೆಸಿದ್ದು, ಹತ್ತು ವಿದ್ಯಾರ್ಥಿ ಗಳನ್ನು ಆಯ್ಕೆ ಮಾಡಲಾಗಿದೆ. ವಿಜೇತ ರಿಗೆ ತಲಾ ₹15 ಸಾವಿರ ನಗದು ಬಹುಮಾನ ನೀಡಲಾಗುತ್ತದೆ’ ಎಂದರು.

‘ವಿಜೇತ ವಿದ್ಯಾರ್ಥಿಗಳು ಕಲಾ ವೃತ್ತಿಯನ್ನು ಮುಂದುವರಿಸಲು ಅಕಾಡೆಮಿ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತದೆ. ಯಾವುದೇ ಹಿರಿಯ ಕಲಾವಿದರ ಮಾರ್ಗದರ್ಶನದಲ್ಲಿ ಅಲ್ಪಾವಧಿಗೆ ಅಧ್ಯಯನ, ತರಬೇತಿ ಅಥವಾ ವಿಶೇಷ ಕಲಾ ಸಂಶೋಧನೆ ನಡೆಸಲು ಬಯಸಿದರೆ ಅದಕ್ಕೆ ಸಂಬಂಧಿಸಿದ ಎಲ್ಲ ಖರ್ಚು ವೆಚ್ಚಗಳನ್ನು ಭರಿಸಲಾಗುತ್ತದೆ. ವಸತಿ ಸೌಲಭ್ಯಕ್ಕೂ ನೆರವು ನೀಡಲಾಗುತ್ತದೆ. ಕಲಾ ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆ ಮತ್ತು ವೃತ್ತಿಪರ ಆಸಕ್ತಿಯನ್ನು ಪ್ರೋತ್ಸಾಹಿಸುವ ಉದ್ದೇಶವನ್ನು ಯೋಜನೆ ಹೊಂದಿದೆ’ ಎಂದು ಹೇಳಿದರು.

‘ಅಕಾಡೆಮಿಯಲ್ಲಿ ಹೊಸದಾಗಿ 4ದತ್ತಿ ಪ್ರಶಸ್ತಿಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ದತ್ತಿ ದಾನಿಗಳ ಜತೆಗೆ ಮಾತುಕತೆ ನಡೆಸುತ್ತಿದ್ದೇವೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-37-856373122

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.