ಬೆಂಗಳೂರು: ಭಾರತೀಯ ವ್ಯಂಗ್ಯಚಿತ್ರಕಾರರ ಸಂಸ್ಥೆಯು ಪ್ರತಿಷ್ಠಿತ ‘ಬಾರ್ಟನ್ ಪ್ರಶಸ್ತಿ 2026’ಕ್ಕೆ ಹೈದರಾಬಾದ್ನ ವ್ಯಂಗ್ಯಚಿತ್ರಕಾರ ಸುಭಾನಿ ಶೇಖ್ ಅವರನ್ನು ಆಯ್ಕೆ ಮಾಡಿದೆ.

ಜೂನ್ 1 ರಂದು ನಡೆಯುವ ಸಂಸ್ಥೆಯ 25ನೇ ವಾರ್ಷಿಕೋತ್ಸವದಲ್ಲಿ ಸುಭಾನಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ‘ಅಂತರರಾಷ್ಟ್ರೀಯ ಮಾಯಾ ಕಾಮತ್ ಸ್ಮಾರಕ’ ವ್ಯಂಗ್ಯಚಿತ್ರ ಸ್ಪರ್ಧೆಯ ವಿಜೇತರಿಗೂ ಬಹುಮಾನವನ್ನು ಇದೇ ಸಂದರ್ಭದಲ್ಲಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಸುಭಾನಿ ಶೇಖ್ ಅವರು ‘ಡೆಕ್ಕನ್ ಕ್ರಾನಿಕಲ್’ ಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿ ಕೆಲಸ ಮಾಡುತ್ತಿದ್ದು, ಅನೇಕ ರಾಷ್ಟ್ರೀಯ , ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-4-2046399229

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.