ಚಿಕ್ಕಮಗಳೂರು: ಹಬ್ಬ ಹರಿದಿನಗಳು, ಜಾತ್ರೆ, ಉತ್ಸವಗಳು ಜನರನ್ನು ಒಗ್ಗೂಡಿಸಿ ಸಮಾಜದಲ್ಲಿ ಸಾಮರಸ್ಯ ಬೆಳೆಸುತ್ತವೆ ಎಂದು ಆಶಾಕಿರಣ ಅಂಧ ಮಕ್ಕಳ ಶಾಲೆಯ ಅಧ್ಯಕ್ಷ ಡಾ.ಜೆ.ಪಿ. ಕೃಷ್ಣೇಗೌಡ ಹೇಳಿದರು.

ತಾಲ್ಲೂಕಿನ ಬೆಳವಾಡಿಯ ಭಜನೆ ಕಲಾವಿದ ಪರಮೇಶ್ವರಪ್ಪ ಅವರ ಮನೆಯಂಗಳದಲ್ಲಿ ಗ್ರಾಮ ದೇವತೆ ಕರಿಯಮ್ಮ ದೇವಿ ಮತ್ತು ಬಿಂದಿಗೆಮ್ಮ ದೇವಿ ಬಂಡಿ ಬಾನೋತ್ಸವ ಹಾಗೂ ಸಿಡಿ ಮಹೋತ್ಸವದ ಅಂಗವಾಗಿ ಬಸವೇಶ್ವರ ಭಜನಾ ಮಂಡಳಿ ಮತ್ತು ಜಾನಪದ ಕಲಾ ಪರಿಷತ್ ಶನಿವಾರ ಏರ್ಪಡಿಸಿದ್ದ ಜಾನಪದ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಬ್ಬ ಹರಿದಿನಗಳು, ಜಾತ್ರೆ, ಉತ್ಸವಗಳಲ್ಲಿ ಎಲ್ಲರೂ ಒಗ್ಗೂಡಿ ಪಾಲ್ಗೊಳ್ಳುವುದರಿಂದ ಭಾವೈಕ್ಯ ಸಾಧಿಸಲು ಸಾಧ್ಯವಾಗುತ್ತದೆ. ಪರಸ್ಪರ ವೈಷಮ್ಯ ಮರೆತು ಒಂದಾಗಿ ಬಾಳಲು ಸಹಕಾರಿಯಾಗುತ್ತದೆ ಎಂದರು.

‘ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಮನುಷ್ಯನ ವ್ಯಕ್ತಿತ್ವ ವಿಕಸನಗೊಳಿಸುತ್ತದೆ. ನಾಗರಿಕತೆ ಕಲಿಸುತ್ತದೆ, ಸ್ವಸ್ಥ ಸಮಾಜ ನಿರ್ಮಾಣ ಮಾಡುತ್ತದೆ. ಜಾನಪದ ನಮ್ಮ ಮೂಲ ಬೇರು, ನಮ್ಮ ಅಸ್ತಿತ್ವ ಇರುವುದೇ ಜಾನಪದದಲ್ಲಿ. ನಮ್ಮ ಹಿರಿಯರಿಂದ ಬಳುವಳಿಯಾಗಿ ಬಂದಿರುವ ಜಾನಪದ ಕಳೆದುಕೊಂಡರೆ ಜಗತ್ತಿನೆದುರು ನಾವು ಒಂಟಿಯಾಗಿ ನಿಲ್ಲಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಬಿ. ಸುರೇಶ್ ಮಾತನಾಡಿ, ಭಾರತೀಯ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿಗೆ ಜಾನಪದದ ಕೊಡುಗೆ ಅಪಾರ. ಜಗತ್ತಿನ ಎಲ್ಲಾ ಕಲೆಗಳಿಗೂ ಜಾನಪದವೇ ತಾಯಿ ಬೇರು. ಗ್ರಾಮೀಣರು ಮತ್ತು ಮಹಿಳೆಯರಿಂದ ಜಾನಪದ ಆಧುನಿಕತೆಯ ಅಬ್ಬರದ ನಡುವೆಯೂ ಉಳಿದು ಬಂದಿದೆ. ಮುಂದೆಯೂ ಅವರಿಂದಲೇ ಉಳಿಯಬೇಕಾಗಿದೆ ಎಂದರು.

ಬಸವೇಶ್ವರ ಭಜನಾ ಮಂಡಳಿ ಅಧ್ಯಕ್ಷ ಪರಮೇಶ್ವರಪ್ಪ ಮಾತನಾಡಿ, ನಶಿಸಿ ಹೋಗುತ್ತಿರುವ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಕರ್ನಾಟಕ ಜಾನಪದ ಪರಿಷತ್ತು ಮಾಡುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿರಾಜ್ ಉನ್ನೀಸಾ, ‘ಜಾನಪದ ನಾಶವಾದರೆ ದೇಶದ ಸಂಸ್ಕೃತಿಯೇ ನಾಶವಾಗುತ್ತದೆ. ಹಾಗಾಗಿ ಸಾರ್ವಜನಿಕವಾಗಿ, ಖಾಸಗಿಯಾಗಿ ನಡೆಸುವ ಎಲ್ಲಾ ಕಾರ್ಯಕ್ರಮಗಳಲ್ಲೂ ಜಾನಪದ ಕಲೆಗಳ ಪ್ರದರ್ಶನಕ್ಕೆ ಅವಕಾಶ ನೀಡಬೇಕು’ ಎಂದರು.

ಗ್ರಾಮದ ಹಿರಿಯ ಜಾನಪದ ಕಲಾವಿದರನ್ನು ಸಮಾರಂಭದಲ್ಲಿ ಗೌರವಿಸಲಾಯಿತು. ಮುಖಂಡರಾದ ಶಂಕರೇಗೌಡ, ಮರುಳಸಿದ್ದಯ್ಯ, ಬೆಳವಾಡಿ ಪ್ರಕಾಶ್, ಶಂಕರಯ್ಯ, ಅಮೀರ್ ಜಾನ್ ಉಪಸ್ಥಿತರಿದ್ದರು. ಸಮಾರಂಭದ ನಂತರ ಜಾನಪದ ಕಲೆಗಳ ಪ್ರದರ್ಶನ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-126-235332535

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.