ಮೂಡಿಗೆರೆ: ತಾಲ್ಲೂಕಿನ ಕೊಟ್ಟಿಗೆಹಾರಲ್ಲಿರುವ ಕೆ.ಪಿ. ಪೂರ್ಣಚಂದ್ರ ಪ್ರತಿಷ್ಠಾನದಲ್ಲಿ ಏಪ್ರಿಲ್ 3ರಿಂದ ಮೂರು ದಿನ ಛಾಯಾಗ್ರಹಣ ಕಾರ್ಯಾಗಾರ ನಡೆಯಲಿದೆ ಎಂದು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ ಡಾ.ಸಿ. ರಮೇಶ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, 'ಏಪ್ರಿಲ್ 3ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಸಂತೆ ಹಾಗೂ ಗ್ರಾಮ್ಯ ಬದುಕಿನ ಛಾಯಾಗ್ರಹಣ ಪ್ರಾತ್ಯಕ್ಷಿಕೆ ನಡೆಯಲಿದೆ. ಏಪ್ರಿಲ್ 4ರಂದು ಪ್ರಕೃತಿ ನಡಿಗೆ ನಡೆಯಲಿದ್ದು ನೈಸರ್ಗಿಕ ಬೆಳಕಿನ ಸಂಯೋಜನೆ, ಹೊರಾಂಗಣ ಛಾಯಾಗ್ರಹಣ ಕುರಿತು ಸಂಪನ್ಮೂಲ ವ್ಯಕ್ತಿಗಳು ತಿಳಿಸಿಕೊಡಲಿದ್ದಾರೆ. ಏಪ್ರಿಲ್ 5ರಂದು ಹೂವು, ಹಕ್ಕಿ ಹಾಗೂ ಕೀಟಗಳ ವೀಕ್ಷಣೆ, ಮ್ಯಾಕ್ರೋ ಛಾಯಾಗ್ರಹಣದ ವಿವರಣಾತ್ಮಕ ಪ್ರಾತ್ಯಕ್ಷಿಕೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಆನಂದ್ಕುಮಾರ್, ಹೊಸಪೇಟೆಯ ಪಂಪಯ್ಯ ಮಳೇಮಠ ಭಾಗವಹಿಸಲಿದ್ದಾರೆ. ಮೊದಲ 25 ನೊಂದಾಯಿತರಿಗೆ ಮಾತ್ರ ಕಾರ್ಯಾಗಾರದಲ್ಲಿ ಭಾಗವಹಿಸಲು ಅವಕಾಶವಿದ್ದು, ನಿಗದಿತ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ:96630 98873, 94493 09067ಗೆ ಸಂರ್ಪಕಿಸಬಹುದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-126-294121478

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.