ಚಿಕ್ಕೋಡಿ: ಪಟ್ಟಣದ ಜಿಎಸ್ಇ ಸಂಸ್ಥೆಯ ಮಹಾವಿದ್ಯಾಲಯದ ಆವರಣದಲ್ಲಿ ಮೇ 3ರಂದು ಬೆಳಿಗ್ಗೆ 10 ಗಂಟೆಗೆ ‘ಶಂಕರ ಸಾಹಿತ್ಯ ರತ್ನ ಪುರಸ್ಕಾರ 2026’ ಸೇರಿದಂತೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಂಸ್ಥೆಯ ಅಧ್ಯಕ್ಷ ಶಂಕರಣ್ಣ ಮಗದುಮ್ಮ ಅವರ 83ನೇ ಜನ್ಮದಿನೋತ್ಸವದ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಪಟ್ಟಣದ ವೈದ್ಯ ಸಾಹಿತಿ ಡಾ. ದಯಾನಂದ ನೂಲಿ ಅವರ ‘ಶರಣರ ಶಿವಯೋಗ’ ಕೃತಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಂಕರಣ್ಣ ಬಾಬುರಾವ ಮಗದುಮ್ಮ ಸಾಂಸ್ಕೃತಿಕ ಪ್ರತಿಷ್ಠಾನದಿಂದ ನೀಡಲಾಗುತ್ತಿರುವ ಚೊಚ್ಚಲ ಪ್ರಶಸ್ತಿ ಇದಾಗಿದ್ದು, ₹15 ಸಾವಿರ ನಗದು, ಫಲಕ, ಸ್ಮರಣಿಕೆ ಒಳಗೊಂಡಿದೆ.

ಚಿಕ್ಕೋಡಿಯ ಸಂಪಾದನಾ ಚರಮೂರ್ತಿ ಮಠದ ಸಂಪಾದನಾ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಂಕರಣ್ಣ ಮಗದುಮ್ಮ ವಹಿಸಲಿದ್ದಾರೆ. ಹಿರಿಯ ಸಾಹಿತಿ ಪ್ರೊ.ಎಸ್.ವೈ ಹಂಜಿ, ನಿವೃತ್ತ ಪ್ರಾಚಾರ್ಯ ಬಸವರಾಜ ಜಗಜಂಪಿ, ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಎಂ.ಬಿ.ಹೂಗಾರ, ಬೆಳಗಾವಿ ಸಾಹಿತಿ ಪಿ.ಜಿ.ಕೆಂಪಣ್ಣವರ ಭಾಗವಹಿಸಲಿದ್ದಾರೆ ಎಂದು ಶಂಕರಣ್ಣ ಮಗದುಮ್ಮ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-21-2051973840

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.