ದಾವಣಗೆರೆ: ಜಿಲ್ಲಾ ಸಾಹಿತ್ಯ ಸಮ್ಮೇಳನದ ರೀತಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಸಂತೆ ನಡೆಸಲು ಸರ್ಕಾರದಿಂದ ಅನುದಾನ ನೀಡಬೇಕು ಎಂದು ದಾವಣಗೆರೆ ಚಿತ್ರಕಲಾ ಪರಿಷತ್ತು ವತಿಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ತು ಅಧ್ಯಕ್ಷ ಬಿ.ಎಲ್. ಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

‘ರಾಜ್ಯದಾದ್ಯಂತ ಸಾಕಷ್ಟು ಸಂಖ್ಯೆಯ ಕಲಾವಿದರು ಇದ್ದಾರೆ. ಅವರನ್ನು ಸಂಘಟಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತು ಜಿಲ್ಲಾ ಮಟ್ಟದಲ್ಲಿ ಶಾಖೆಗಳನ್ನು ವಿಸ್ತರಿಸಬೇಕು. ಸಮ್ಮೇಳನ ನಡೆಸಿ ಹೊಸ ಪ್ರಯೋಗ ಸಾಧ್ಯತೆಯ ಬಗ್ಗೆ ಚಿಂತನ- ಮಂಥನ ನಡೆಸುವ ನಿಟ್ಟಿನಲ್ಲಿ ಯಾವುದೇ ಉಪಕ್ರಮವಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಸಹಾಯ ಹಸ್ತ ನೀಡಬೇಕು’ ಎಂದು ದಾವಣಗೆರೆ ಚಿತ್ರಕಲಾ ಪರಿಷತ್ತು ವತಿಯಿಂದ ಡಿ. ಶೇಷಾಚಲ ಮತ್ತು ಸದಾನಂದ ಹೆಗಡೆ ಅವರು ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಬಿ.ಎಲ್. ಶಂಕರ್, ‘ಚಿತ್ರಕಲಾ ಪರಿಷತ್ತನ್ನು ವಿಸ್ತರಿಸಬೇಕು ಎಂಬ ನಿಟ್ಟಿನಲ್ಲಿ ಹುಬ್ಬಳ್ಳಿ, ಬೆಳಗಾವಿ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿಯೂ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಇನ್ನೂ ಅಂತಿಮ ತೀರ್ಮಾನವಾಗಿಲ್ಲ’ ಎಂದರು.

‘ಚಿತ್ರಸಂತೆ ನಡೆಸುವ ನಿಟ್ಟಿನಲ್ಲಿ ಸಹಾಯ ಮಾಡುವಂತೆ ಸರ್ಕಾರಕ್ಕೆ ಕಲಾವಿದರ ಪರವಾಗಿ ಮನವರಿಕೆ ಮಾಡಲು ಪ್ರಯತ್ನ ಮಾಡುತ್ತೇನೆ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-43-1187737312

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.