ನರಸಿಂಹರಾಜಪುರ: ‘ಗಿರಿಜನ ಸುರಕ್ಷಾ ವೇದಿಕೆ– ಕರ್ನಾಟಕ ವತಿಯಿಂದ ಜನನಾಯಕ ಭಗವಾನ್ ಬಿರ್ಸಾ ಮುಂಡಾ ಅವರು 150ನೇ ಜಯಂತಿ ಅಂಗವಾಗಿ ಮೇ 24ರಂದು ನವದೆಹಲಿಯಲ್ಲಿ ಸಾಂಸ್ಕೃತಿಕ ಸಮಾಗಮ ಆಯೋಜಿಸಲಾಗಿದೆ’ ಎಂದು ವೇದಿಕೆಯ ಜಿಲ್ಲಾ ಸಂಚಾಲಕ ಎನ್.ಜಯರಾಮ ತಿಳಿಸಿದರು.

ದೇಶದ ಗಿರಿಜನರ ಸಾಂಸ್ಕೃತಿಕ ಅಸ್ತಿತ್ವ ಮತ್ತು ಸಮುದಾಯದ ಚೇತನದ ಪ್ರತೀಕವಾದ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತ್ಯುತ್ಸವದಲ್ಲಿ ದೇಶದ ವಿವಿಧ ಭಾಗಗಳಿಂದ ಸುಮಾರು 1.50 ಲಕ್ಷಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿ ವಿಷಯ ಮಂಡನೆ ಮಾಡಲಿದ್ದು, ಜಿಲ್ಲೆಯಿಂದ 100ಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಸಾಂಸ್ಕೃತಿಕ ಶೋಭಾಯಾತ್ರೆ ನಡೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಸಾಂಸ್ಕೃತಿಕ ದಿರಿಸಿನೊಂದಿಗೆ ಭಾಗವಹಿಸುವರು. ಕೆಂಪು ಕೋಟೆಯಲ್ಲಿ ನಡೆಯುವ ಮಹಾಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸುವ ನಿರೀಕ್ಷೆಯಿದೆ. ವನವಾಸಿ– ಗ್ರಾಮವಾಸಿ– ನಗರವಾಸಿಗಳಾದ ನಾವೆಲ್ಲ ಭಾರತ ವಾಸಿಗಳು. ನಮ್ಮೆಲ್ಲರ ರಕ್ತ ಒಂದೇ ಆಗಿರುತ್ತದೆ ಎಂಬುದು ಸಾಂಸ್ಕೃತಿ ಸಮಾ ವೇಶದ ಸಂದೇಶವಾಗಿದೆ ಎಂದು ಅವರು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-126-493346911

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.