ದೊಡ್ಡಬಳ್ಳಾಪುರ: ಕನ್ನಡ ನಾಡು, ನುಡಿ ಸಂಸ್ಕೃತಿಗೆ ಡಾ.ರಾಜ್ಕುಮಾರ್ ಅವರ ಕೊಡುಗೆ ಅವಿಸ್ಮರಣೀಯ. ಅವರಿಗೆ ಭಾರತ ರತ್ನ ನೀಡಬೇಕೆಂದು ನಗರಸಭೆ ಸದಸ್ಯ ತ.ನ ಪ್ರಭುದೇವ್ ಒತ್ತಾಯಿಸಿದರು.

ನಗರದ ಹಳೆ ಆಸ್ಪತ್ರೆ ವೃತ್ತದಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳಿಂದ ನಡೆದ ಡಾ.ರಾಜ್ಕುಮಾರ್ ಹುಟ್ಟುಹಬ್ಬದಲ್ಲಿ ಮಾತನಾಡಿದರು.

ಕನ್ನಡ ಮತ್ತು ಸಂಸ್ಕೃತಿ ಬಗ್ಗೆ ವರನಟ ಅವರಿಗಿದ್ದ ಬದ್ಧತೆಯಿಂದ ಅವರು ಕನ್ನಡಿಗರ ಹೃದಯದಲ್ಲಿ ವಿಶೇಷ ಸ್ಥಾನ ಪಡೆಯುಂತೆ ಮಾಡಿದೆ. ಕನ್ನಡಿಗರಲ್ಲಿ ಕನ್ನಡ ನಾಡು ನುಡಿಯ ಪ್ರಜ್ಞೆ ಜಾಗೃತಗೊಳಿಸಿದರು. ಗೋಕಾಕ್ ಚಳುವಳಿ ನೇತೃತ್ವವಹಿಸಿ ಹೋರಾಟಕ್ಕೆ ಶಕ್ತಿ ತುಂಬಿದರು ಎಂದು ತಿಳಿಸಿದರು.

ತಾಲ್ಲೂಕಿನೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದ ಅವರು, ಗಾಜನೂರಿನಲ್ಲಿ ಹುಟ್ಟಿದ ಅವರು ಇಡೀ ರಾಜ್ಯಕ್ಕೆ ಸಾಂಸ್ಕೃತಿಕ ರಾಯಭಾರಿಯಾಗಿ ಗುರುತಿಸಿಕೊಂಡಿದ್ದಾರೆ ಎಂದರು.

ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ ನಾಯಕ್, ಅಪ್ರತಿಮ ಕಲಾವಿದರಾಗಿ ಎಲ್ಲಾ ಜನರ ಪ್ರೀತಿಗೆ ಪಾತ್ರರಾದ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ. ಕನ್ನಡ ಭಾಷೆ, ಸಂಸ್ಕೃತಿ ಮತ್ತು ನೆಲ ಜಲದ ಬಗ್ಗೆ ಅಪಾರ ಗೌರವ ಹೊಂದಿದ್ದರು. ಹುಟ್ಟುಹಬ್ಬವನ್ನು ರಾಜ್ಯ ಸರ್ಕಾರ ಜಯಂತಿಯಾಗಿ ಆಚರಿಸುವ ಮೂಲಕ ಅವರಿಗೆ ಗೌರವ ಸಮರ್ಪಣೆ ಮಾಡಬೇಕು ಎಂದರು.

ದೊಡ್ಡಬಳ್ಳಾಪುರ ಶ್ರೀರಾಮ್ ಮೆಲೋಡಿಸ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಡಾ.ರಾಜ್ ಕುಮಾರ್ ಅಭಿಮಾನಿಗಳಿಂದ ನೆಲದಾಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಅನ್ನದಾನ ಮತ್ತು ಸಿಹಿ ಹಂಚಿಕೆ

ಕಸಾಪ ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಕರ್ನಾಟಕ ರಕ್ಷಣಾ ವೇದಿಕೆಯ ರಾಜಘಟ್ಟ ರವಿ, ಮರುಳಾರಾಧ್ಯ, ಕಜಾಪ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಡಾ.ರಾಜ್ ಅಭಿಮಾನಿ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಶಿವರಾಜ್ ಅಭಿಮಾನಿ ಸಂಘದ ರಮೇಶ್, ಚೌಡರಾಜ್, ಪರಮೇಶ್, ಕನ್ನಡ ಪಕ್ಷದ ಅಧ್ಯಕ್ಷ ವೆಂಕಟೇಶ್, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ನವೀನ್ದೇವ್,ಕಸಾಪ ಗೌರವ ಕಾರ್ಯದರ್ಶಿ ಎ. ಜಯರಾಮ, ಕೋಶಾಧ್ಯಕ್ಷ ಜಿ. ಸುರೇಶ್, ಸಾಹಿತಿ ಮಹದೇವ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-15-1755580352

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.