ತ್ಯಾಗರ್ತಿ: ‘ಜನಪದ ಕಲೆ ಮತ್ತು ಸಾಹಿತ್ಯ ಉಳಿಸಿ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕಾರ್ಯ ನಿರಂತರವಾಗಿ ನಡೆಯಬೇಕು’ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಆರ್.ಸಿ. ಜಗದೀಶ್ ಹೇಳಿದರು.

ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯ ಕೃಷಿ ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಕಣ್ಣೇಶ್ವರ ಜನಪದ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ‘ಜನಪದ ಕಲಾ ಉತ್ಸವ’ ಉದ್ಘಾಟಿಸಿ ಮಾತನಾಡಿದರು.

‘ಜನಪದ ಕಲೆಗಳು ಜನರ ಬದುಕು, ಸಂಸ್ಕೃತಿ ಹಾಗೂ ಪರಂಪರೆಯ ಪ್ರತೀಕವಾಗಿವೆ. ಪ್ರಾಚೀನ ಕಾಲದಿಂದಲೂ ಜನಜೀವನದೊಂದಿಗೆ ಬೆಸೆದುಕೊಂಡಿರುವ ಜನಪದ ಸಾಹಿತ್ಯ ಮತ್ತು ಕಲೆಯನ್ನು ಜೀವಂತವಾಗಿಡಲು ಇಂತಹ ಕಾರ್ಯಕ್ರಮಗಳು ಅಗತ್ಯವಾಗಿದ್ದು, ಇಂದಿನ ಯುವಪೀಳಿಗೆ ಜನಪದವನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಜನಪದವು ನಮ್ಮ ತಾಯಿ ಬೇರಿದ್ದಂತೆ. ಭಾರತದ ಜನಪದ ಪರಂಪರೆ ಜಗತ್ತಿನಲ್ಲೇ ಶ್ರೀಮಂತವಾಗಿದೆ. ಮಲೆನಾಡಿನ ಜನಪದ ಕಲೆಗಳಿಗೆ ವಿಶೇಷ ಸ್ಥಾನವಿದ್ದು, ಇಂತಹ ಕಲೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಕೆಲಸವಾಗಬೇಕು’ ಎಂದು ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ ಬಿ.ಟಾಕಪ್ಪ ಕಣ್ಣೂರು ಹೇಳಿದರು.

ಉತ್ಸವದಲ್ಲಿ ಡೊಳ್ಳು ಕುಣಿತ, ವೀರಗಾಸೆ, ಜೋಗಿ ಪದ, ಮಹಿಳಾ ಡೊಳ್ಳು ಕುಣಿತ, ಬಂಜಾರ ನೃತ್ಯ, ಪೂಜಾ ಕುಣಿತ, ನಂದಿಧ್ವಜ ಹಾಗೂ ಸೋಮನ ಕುಣಿತ ಸೇರಿ ವಿವಿಧ ಜನಪದ ಕಲಾ ತಂಡಗಳ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಿದವು.

ಕಣ್ಣೇಶ್ವರ ಜನಪದ ಕಲಾ ಸಂಘದ ಅಧ್ಯಕ್ಷ ಟೀಕಪ್ಪ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಆನಂದಪುರ ಘಟಕದ ಅಧ್ಯಕ್ಷ ಬಿ.ಡಿ. ರವಿಕುಮಾರ್, ಕಣ್ಣೂರು ಗ್ರಾಮ ಸುಧಾರಣಾ ಸಮಿತಿ ಅಧ್ಯಕ್ಷ ನಾಗರಾಜ್ ಸಂಗೀ, ಕೃಷಿ ವಿವಿಯ ಪ್ರಮುಖರಾದ ನಾರಾಯಣ ಮಾವರ್ಕರ್, ಶಶಿಧರ್ ಕೆ.ಸಿ, ರವಿಕುಮಾರ್, ಗಣಪತಿ, ಮಾನ್ಯ ಪಾಟೀಲ್, ರಕ್ಷಿತಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-42-582740432

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.