ಗದಗ: ‘ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನದಿಂದ ನೀಡುವ ‘ಮಾನವತಾವಾದಿ ಶ್ರೀ ಬಸವೇಶ್ವರ ಪ್ರಶಸ್ತಿ’ಗೆ ಈ ಬಾರಿ ರಾಜಸ್ಥಾನದ ಜಲಸಂರಕ್ಷಕ ರಾಜೇಂದ್ರಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ಎಲ್. ಲಿಂಬಯ್ಯಸ್ವಾಮಿಮಠ ಹೇಳಿದರು.

‘ಮೇ 25ರಂದು ನಗರದ ತೋಂಟದಾರ್ಯ ಮಠದಲ್ಲಿ ನಡೆಯುವ 2,799ನೇ ಶಿವಾನುಭವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಪ್ರಶಸ್ತಿ ಪ್ರದಾನ ಮಾಡುವರು. ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ತಾಮ್ರದ ಫಲಕ ಒಳಗೊಂಡಿದೆ’ ಎಂದು ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನವು ಪ್ರತಿವರ್ಷ ಅಂಗವಿಕಲ ಸಾಧಕರು, ಸಾಧಕ ಆದರ್ಶ ದಂಪತಿ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ಮಾನವೀಯತೆ ಮೆರೆದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಿಕೊಂಡು ಬರುತ್ತಿದೆ’ ಎಂದು ತಿಳಿಸಿದರು.

‘1997ರಲ್ಲಿ ಲಿಂಬಯ್ಯಸ್ವಾಮಿಮಠ ಅವರಿಂದ ಸ್ಥಾಪಿತವಾದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನ 1998ರಿಂದ ಈವರೆಗೆ 27 ಜನ ಸಾಧಕರಿಗೆ ‘ಮಾನವತಾವಾದಿ ಶ್ರೀ ಬಸವೇಶ್ವರ ಪ್ರಶಸ್ತಿ’ ನೀಡಿ ಗೌರವಿಸಿದೆ. ಜಲಸಂರಕ್ಷಕ ರಾಜೇಂದ್ರಸಿಂಗ್ ಅವರಿಗೆ ನೀಡುತ್ತಿರುವುದು 28ನೇ ಪ್ರಶಸ್ತಿಯಾಗಿದೆ’ ಎಂದು ತಿಳಿಸಿದರು.

ಮೇ 25ರಂದು ಸಂಜೆ 7ಕ್ಕೆ ನಗರದ ತೋಂಟದಾರ್ಯ ಮಠದಲ್ಲಿ ನಡೆಯುವ ಶಿವಾನುಭವದಲ್ಲಿ ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಪ್ರಶಸ್ತಿ ಪ್ರದಾನ ಮಾಡುವರು. ಸಾಹಿತಿ ಜೆ.ಕೆ. ಜಮಾದಾರ ಉಪನ್ಯಾಸ ನೀಡುವರು. ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ, ಮಾಜಿ ಸಚಿವ ಎಚ್.ಎಸ್. ಪಾಟೀಲ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಮೋಹನ ಲಿಂಬಿಕಾಯಿ ಪಾಲ್ಗೊಳ್ಳುವರು’ ಎಂದು ಹೇಳಿದರು.

ಪ್ರತಿಷ್ಠಾನದ ಕಾರ್ಯದರ್ಶಿ ಈಶ್ವರ ಮೆಡ್ಲೇರಿ ಅವರು ಪ್ರತಿಷ್ಠಾನ ನಡೆದು ಬಂದ ಹಾದಿಯನ್ನು ವಿವರಿಸಿದರು.

ತೋಂಟದಾರ್ಯ ಜಾತ್ರಾ ಕಮಿಟಿ ಅಧ್ಯಕ್ಷ ವಿನಾಯಕ ಮಾನ್ವಿ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಡಾ. ಉಮೇಶ ಪುರದ, ಸಂತೋಷ ಗಾರ್ಗಿ, ಬಸಣ್ಣ ಗಾಂಜಿ, ಸಿದ್ರಾಮೇಶ ಪಟ್ಟೇದ, ಸುರೇಖಾ ಪಿಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-23-762303558

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.