ಹಾವೇರಿ: ‘ಇಜಾರಿ ಲಕಮಾಪುರ ಬಳಿಯ ಸಿದ್ಧಾರೂಢ ಕಾಲೊನಿಯಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಮೇ 25ರಂದು ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಲಾ ಬಳಗ ರಾಜ್ಯ ಸಮಿತಿ ‘ಎರಡನೇ ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಕರುನಾಡ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ’ ಹಮ್ಮಿಕೊಳ್ಳಲಾಗಿದೆ’ ಎಂದು ಬಳಗದ ಅಧ್ಯಕ್ಷ ಎಸ್.ಡಿ. ಮುಡೆಣ್ಣವರ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಕ ಜಿ.ಎಂ.ಓಂಕಾರಣ್ಣನವರ ಅವರನ್ನು ಆಯ್ಕೆ ಮಾಡಲಾಗಿದೆ. ಮೇ 25ರಂದು ಬೆಳಿಗ್ಗೆ 8 ಗಂಟೆಗೆ ಕನ್ನಡ ಧ್ವಜಾರೋಹಣವನ್ನು ಕೋರಗಲ್ಲ ವಿರುಪಾಕ್ಷಪ್ಪ ನೆರವೇರಿಸುವರು. ಬೆಳಿಗ್ಗೆ 9 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಡಿಎಸ್ಎಸ್ ರಾಜ್ಯ ಸಂಚಾಲಕ ಎಸ್. ಫಕ್ಕೀರಪ್ಪ ಚಾಲನೆ ನೀಡಲಿದ್ದಾರೆ’ ಎಂದರು.

‘ಬೆಳಿಗ್ಗೆ 10.30 ಗಂಟೆಗೆ ಸಮ್ಮೇಳನವನ್ನು ಶಾಸಕ ರುದ್ರಪ್ಪ ಲಮಾಣಿ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಪುಸ್ತಕ ಲೋಕಾರ್ಪಣೆ, ಸಮ್ಮೇಳನಾಧ್ಯಕ್ಷರ ಭಾಷಣ, ಗೋಷ್ಠಿಗಳು ನಡೆಯಲಿದೆ’ ಎಂದರು.

‘ಮಧ್ಯಾಹ್ನ 2.30 ಗಂಟೆಗೆ ಕವಿ ಸತೀಶ ಕುಲಕರ್ಣಿ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಪ್ರೊ. ಎಚ್.ಎ. ಭಿಕ್ಷಾವರ್ತಿಮಠ ಅವರಿಗೆ ಕರುನಾಡ ಶಹರಿ ರತ್ನ ಪ್ರಶಸ್ತಿ ನೀಡಲಾಗುವುದು. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭವಿದೆ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ 31 ಜಿಲ್ಲೆಗಳ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-22-1121037030

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.