ಹುಬ್ಬಳ್ಳಿ: ಗಂಗಾಧರ ರಾಜಯೋಗೀಂದ್ರ ಸ್ವಾಮೀಜಿ ಸ್ಮರಣಾರ್ಥ ಹುಬ್ಬಳ್ಳಿಯ ಜಗದ್ಗುರು ಮೂರುಸಾವಿರಮಠ ಮಹಾಸಂಸ್ಥಾನದಿಂದ ನೀಡಲಾಗುವ ‘ಡಾ. ಮೂಜಗಂ ಸಾಹಿತ್ಯ ಪ್ರಶಸ್ತಿ’ಗೆ ಇಲ್ಲಿನ ಶಾಂತಾಶ್ರಮದ ಅಭಿನವ ಸಿದ್ಧಾರೂಢ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ.

ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ವಚನ ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದ್ದು, ಮೂರುಸಾವಿರಮಠದ ಶಾಲಾ ಆವರಣದಲ್ಲಿ ಮೇ 26ರಂದು ನಡೆಯಲಿರುವ ಗಂಗಾಧರ ರಾಜಯೋಗೀಂದ್ರ ಸ್ವಾಮೀಜಿಯವರ 23ನೇ ಪುಣ್ಯ ಸ್ಮರಣೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆ, ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ಶಾಸಕರಾದ ಪ್ರಸಾದ ಅಬ್ಬಯ್ಯ, ಮಹೇಶ ಟೆಂಗಿನಕಾಯಿ, ಪ್ರಮುಖರಾದ ವೀರಣ್ಣ ಮತ್ತಿಕಟ್ಟಿ, ಶಂಕ್ರಣ್ಣ ಮುನವಳ್ಳಿ, ಸುನಿತಾ ಬುರಬುರೆ ಭಾಗವಹಿಸುವರು. ವಿವಿಧ ಮಠಾಧೀಶರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-24-2074356445

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.