ಹುಬ್ಬಳ್ಳಿ: ‘ಕನ್ನಡ ಧ್ವನಿ ಟ್ರಸ್ಟ್ನಿಂದ ಸಾಧಕರನ್ನು ಗುರುತಿಸಿ, ಸನ್ಮಾನಿಸುತ್ತಿರುವುದು ಉತ್ತಮ ಕಾರ್ಯ. ಇದು ಇತರರಿಗೆ ಪ್ರೇರಣೆಯಾಗಲಿದೆ’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಕನ್ನಡ ಧ್ವನಿ ಟ್ರಸ್ಟ್ನಿಂದ ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಭವನದಲ್ಲಿ ಭಾನುವಾರ ಏರ್ಪಡಿಸಿದ್ದ ‘ಕನ್ನಡ ಧ್ವನಿ ಸಂಭ್ರಮ–26’ ರಾಜ್ಯಮಟ್ಟದ ಕಥೆ, ಕವನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಎಲ್ಲರೂ ಪುಸ್ತಕಗಳನ್ನು ಖರೀದಿಸಿ ಓದಬೇಕು. ಇದರಿಂದ ಲೇಖಕರನ್ನು ಪ್ರೋತ್ಸಾಹಿಸಿದಂತಾಗುತ್ತದೆ. ರಾಜ್ಯಮಟ್ಟದ ಕಥೆ, ಕವನ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಕೃತಿಗಳನ್ನು ಗ್ರಂಥಾಲಯ ಇಲಾಖೆಯಿಂದ ಖರೀದಿಸುವಂತೆ ಸಂಬಂಧಿಸಿದವರೊಂದಿಗೆ ಮಾತನಾಡುತ್ತೇನೆ’ ಎಂದರು.

ಸಾಹಿತಿ ಸತೀಶ ಕುಲಕರ್ಣಿ ಮಾತನಾಡಿ, ‘ಅನೇಕ ಯುವ ಸಾಹಿತಿಗಳು ಎಲೆಮರೆಯ ಕಾಯಿಯಂತೆ ಇದ್ದಾರೆ. ಸ್ಪರ್ಧೆ ಏರ್ಪಡಿಸಿ, ಬಹುಮಾನ ನೀಡಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ಪುಸ್ತಕ ಪ್ರಕಟಣೆ ಸೇರಿ ಇನ್ನಿತರ ವಿಷಯಗಳಲ್ಲಿ ಹೊಸ ಸಾಹಿತಿಗಳಿಗೆ ಮಾರ್ಗದರ್ಶನ ಕೊರತೆ ಇದ್ದು, ಈ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಬೇಕು’ ಎಂದು ಹೇಳಿದರು.

ಟ್ರಸ್ಟ್ ಅಧ್ಯಕ್ಷ ಗಣಪತಿ ಗಂಗೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾಸಾಗರ ದಿಕ್ಷಿತ್ (ಪ್ರಥಮ), ಮಂಜುನಾಥ ಹೊಸ್ಮನೆ (ದ್ವಿತೀಯ), ಎಸ್.ಎಲ್. ವರಲಕ್ಷ್ಮಿ (ತೃತೀಯ) ಹಾಗೂ ಕಥಾ ಸ್ಪರ್ಧೆಯ ವಿಜೇತರಾದ ಜಮೀರ ರಿತ್ತಿ (ಪ್ರಥಮ), ಲತಾ ಹೆಗಡೆ (ದ್ವಿತೀಯ), ಎನ್.ಆರ್. ರೂಪಶ್ರೀ (ತೃತೀಯ) ಅವರಿಗೆ ಬಹುಮಾನ ವಿತರಿಸಲಾಯಿತು.

ಕಥೆ, ಕವನ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ವಿವೇಕ ಹೆಗಡೆ, ಸುಷ್ಮಾ ಸವಸುದ್ದಿ, ಮಲ್ಲಿಕಾರ್ಜುನ ಶೆಲ್ಲಿಕೇರಿ, ದಿವ್ಯಾ ಹೆಗಡೆ, ಎನ್.ಶಂಕರರಾವ್, ಸಂಧ್ಯಾ ಬದಾಮಿ ಮತ್ತು ವಿವಿಧ ಕ್ಷೇತ್ರಗಳ ಸಾಧಕರಾದ ಅಭಿಜೀತ್ ಬೆಂಗೇರಿ, ಎಂ.ಜೆ.ಜೀವಣ್ಣವರ, ಮುರುಗೇಶ ಚನ್ನಣ್ಣವರ, ಶಾಂತಣ್ಣ ಕಡಿವಾಲ, ಜಯರಾಮ ಶೆಟ್ಟಿ, ಸವಿತಾ ಅಮರಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಮಜೇಥಿಯಾ ಫೌಂಡೇಶನ್ ಅಧ್ಯಕ್ಷ ಜಿತೇಂದ್ರ ಮಜೇಥಿಯಾ ಅಧ್ಯಕ್ಷತೆ ವಹಿಸಿದ್ದರು. ಪತಂಜಲಿ ಯೋಗ ಸಮಿತಿ ದಕ್ಷಿಣ ಭಾರತ ಪ್ರಭಾರಿ ಭವರ್ಲಾಲ್ ಆರ್ಯ, ನಿವೃತ್ತ ಎಸ್ಪಿ ಎ.ಆರ್.ಬಡಿಗೇರ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಜಿ.ಕೆ.ಆದಪ್ಪಗೌಡರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-24-1171298158

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.