ಹುಬ್ಬಳ್ಳಿ: ಲಡಾಯಿ ಪ್ರಕಾಶನ, ಚಿತ್ತಾರ ಕಲಾಬಳಗ, ಕವಿ ಪ್ರಕಾಶನ, ಮೇ ಸಾಹಿತ್ಯ ಮೇಳ ಬಳಗದ ವತಿಯಿಂದ 12ನೇ ಮೇ ಸಾಹಿತ್ಯ ಮೇಳವನ್ನು ಮೇ 16 ಹಾಗೂ 17ರಂದು ನಗರದ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.

‘ಸಾಂವಿಧಾನಿಕ ಪ್ರಜಾಸತ್ತೆಯ ಮೇಲಿನ ದಾಳಿ; ಚಹರೆಗಳು ಹಾಗೂ ಹೊರದಾರಿಗಳು’ ವಿಷಯದಡಿ ನರಗುಂದ–ನವಲಗುಂದ ರೈತ ಬಂಡಾಯ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

16ರಂದು ಬೆಳಿಗ್ಗೆ 9.30ಕ್ಕೆ ಪುಸ್ತಕ ಮಳಿಗೆ, ಚಿತ್ರಕಲಾ ಪ್ರದರ್ಶನ ಮಳಿಗೆ ಉದ್ಘಾಟಿಸಲಾಗುತ್ತದೆ. 10 ಗಂಟೆಗೆ ಉದ್ಘಾಟನಾ ಗೋಷ್ಠಿ, ಹಕ್ಕೊತ್ತಾಯ ಮಂಡನೆ, ‘ಶಿಕಾರಿ’ ಕಾದಂಬರಿ ಬಿಡುಗಡೆ ಮಾಡಲಾಗುತ್ತದೆ. ಮಧ್ಯಾಹ್ನ 1 ಗಂಟೆಗೆ ‘ಸಮತೆಯೆಡೆಗೆ; ನರ್ತನ ಪ್ರಸ್ತುತಿ’, ನಂತರ ವಿವಿಧ ಗೋಷ್ಠಿ ಹಾಗೂ ಕವಿಗೋಷ್ಠಿ ಜರುಗಲಿದೆ.

17ರಂದು ಬೆಳಿಗ್ಗೆ 8.30ಕ್ಕೆ ಎಸ್ಐಆರ್ ರದ್ದುಗೊಳಿಸಲು ಆಗ್ರಹಿಸಿ ಪ್ರತಿಭಟನಾ ಜಾಥಾವು ಚನ್ನಮ್ಮ ವೃತ್ತದಿಂದ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದವರೆಗೆ ನಡೆಯಲಿದೆ. 9.30ಕ್ಕೆ ಕವಿಗೋಷ್ಠಿ, ನಂತರ ವಿವಿಧ ಗೋಷ್ಠಿಗಳು, ಸಂಜೆ 5.30ಕ್ಕೆ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-24-271044233

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.