ಮಡಿಕೇರಿ: ‘ಮಾತೃಭಾಷೆಯ ಹೆಸರಿನಲ್ಲಿ ಬ್ಯಾರಿ ಸಮುದಾಯದ ಎಲ್ಲರನ್ನೂ ಒಗ್ಗೂಡಿಸುವ ದೃಷ್ಟಿಯಿಂದ ಹಾಗೂ ಬ್ಯಾರಿ ಭಾಷೆ ಉಳಿಸಿ, ಬೆಳೆಸುವ ಉದ್ದೇಶದಿಂದ ಬ್ಯಾರಿ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುತ್ತಿದೆ’ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಯು.ಎಚ್. ಉಮರ್ ತಿಳಿಸಿದರು.

‘ಅಕಾಡೆಮಿಯು ಕೊಡಗು ಬ್ಯಾರೀಸ್ ವೆಲ್ ಫೇರ್ ಟ್ರಸ್ಟ್ನ ಸಹಯೋಗದೊಂದಿಗೆ ಏ.28ರಂದು ಮಡಿಕೇರಿಯ ಕಾವೇರಿ ಹಾಲ್ನಲ್ಲಿ ಕೊಡಗು ಜಿಲ್ಲೆಯ ಮೊದಲ ಬ್ಯಾರಿ ಸಾಹಿತ್ಯ ಸಮ್ಮೇಳನ ಆಯೋಜಿಸಿದ್ದು, ಈಗಾಗಲೇ ಮಂಗಳೂರು ತಾಲ್ಲೂಕಿನಲ್ಲಿ ಸಮ್ಮೇಳನ ಜರುಗಿದೆ. ಮುಂದೆ ಉಳ್ಳಾಲ, ಬಂಟ್ವಾಳಗಳಲ್ಲಿಯೂ ನಡೆಯಲಿದೆ. ಜೊತೆಗೆ, ನವೆಂಬರ್ ಅಥವಾ ಡಿಸೆಂಬರ್ನಲ್ಲಿ ರಾಜ್ಯಮಟ್ಟದ ಬ್ಯಾರಿ ಸಾಹಿತ್ಯ ಸಮ್ಮೇಳನವು ಚಿಕ್ಕಮಗಳೂರಿನಲ್ಲಿ ಹಾಗೂ ದುಬೈನಲ್ಲಿ ಅಂತರರಾಷ್ಟ್ರೀಯ ಸಮ್ಮೇಳನಗಳನ್ನು ಆಯೋಜಿಸುವ ಗುರಿ ಹೊಂದಲಾಗಿದೆ’ ಎಂದು ಅವರು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಕೊಡಗು ಜಿಲ್ಲಾ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಬಿ.ಎ. ಷಂಶುದ್ದೀನ್ ಆಯ್ಕೆಯಾಗಿದ್ದು, ಹಿರಿಯ ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಮುಖ್ಯ ಭಾಷಣ ಮಾಡಲಿದ್ದಾರೆ’ ಎಂದು ತಿಳಿಸಿದರು.

ಸಮ್ಮೇಳನವನ್ನು ಬೆಳಿಗ್ಗೆ 10.30ಕ್ಕೆ ವಿಧಾನ ಪರಿಷತ್ನ ಮಾಜಿ ಸದಸ್ಯ ಬಿ.ಎಂ. ಫಾರೂಕ್ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಸಮ್ಮೇಳನಾಧ್ಯಕ್ಷರ ಭಾಷಣದ ಮೇಲೆ ನಡೆಯಲಿರುವ ಚರ್ಚಾಗೋಷಿಯನ್ನು ಹಿರಿಯ ಪತ್ರಕರ್ತ ಬಿ.ಎಂ.ಹನೀಫ್ ನಿರೂಪಿಸಲಿದ್ದಾರೆ. ಸಂಜೆ 4.30ಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಸಮಾರೋಪ ಸಮಾರಂಭ ಉದ್ಘಾಟಿಸಲಿದ್ದು, ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭಾಗವಹಿಸಲಿದ್ದಾರೆ. ಶಾಸಕ ಡಾ.ಮಂತರ್ಗೌಡ ಸಮ್ಮೇಳನದ ಅಂಗವಾಗಿ ನಡೆದ ಸ್ಪರ್ಧೆಗಳ ಬಹುಮಾನ ವಿತರಣೆ ಮಾಡಲಿದ್ದಾರೆ ಎಂದು ಸಮ್ಮೇಳನದ ಕುರಿತು ಮಾಹಿತಿ ನೀಡಿದರು.

ಸಮ್ಮೇಳನ ಸ್ವಾಗತ ಸಮಿತಿಯ ಪ್ರಧಾನ ಕಾರ್ಯ ದರ್ಶಿ ಎಸ್.ಐ.ಮುನೀರ್ ಅಹಮದ್ ಮಾತನಾಡಿ, ‘ಕನ್ನಡ ಸಾಹಿತ್ಯಕ್ಕೆ ಬ್ಯಾರಿ ಭಾಷಿಕರ ಕೊಡುಗೆ ಅತ್ಯಮೂಲ್ಯವಾಗಿದೆ’ ಎಂದು ತಿಳಿಸಿದರು.

ಸ್ವಾಗತ ಸಮಿತಿ ಉಪಾಧ್ಯಕ್ಷ ಅಮೀನ್ ಮೊಹ್ಸಿನ್ ಮಾತನಾಡಿ, ‘ಇಂದು ಬ್ಯಾರಿ ಭಾಷೆಯ ಮುಂದೆ ಹಲವು ಸವಾಲು ಗಳಿವೆ. ಆ ಸವಾಲುಗಳನ್ನು ಎದುರಿಸಲು ಹಾಗೂ ಪ್ರಗತಿಶೀಲ ಸಮಾಜ ನಿರ್ಮಾಣಕ್ಕೆ ಬ್ಯಾರಿ ಸಾಹಿತ್ಯ ಸಮ್ಮೇಳನ ಸಹಕಾರಿಯಾಗಲಿದೆ’ ಎಂದರು.

ಉದ್ಯೋಗವಕಾಶಗಳಲ್ಲಿ ಬ್ಯಾರಿ ಭಾಷಿಕರಿಗೆ ಪ್ರಾತಿನಿಧ್ಯ ಕೊಡುವುದು, ಬ್ಯಾರಿ ಭವನ ನಿರ್ಮಾಣಕ್ಕೆ ಸ್ಥಳ ನೀಡುವುದು ಸೇರಿದಂತೆ ಇನ್ನೂ ಅನೇಕ ವಿಷಯಗಳು ಚರ್ಚೆಯಾಗುವ ಸಾಧ್ಯತೆ ಇದೆ ಎಂದರು.

ಸಮ್ಮೇಳನ ಸ್ವಾಗತ ಸಮಿತಿಯ ಕಾರ್ಯದರ್ಶಿ ಅಬ್ದುಲ್ಲಾ, ಉಪಾಧ್ಯಕ್ಷ ಎಂ.ಎ.ನಾಸಿರ್ ಅಹಮ್ಮದ್, ಉಪಾಧ್ಯಕ್ಷ ಕಲೀಮ್ ಅಹಮ್ಮದ್ ಇದ್ದರು..

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-51-1169992020

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.