ಕುಶಾಲನಗರ: ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಜೂ. 23 ರಂದು ಇಲ್ಲಿನ ರೈತ ಸಹಕಾರ ಭವನದಲ್ಲಿ ಪ್ರಥಮ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಆಯೋಜಿಸುವುದಾಗಿ ವಿರಾಜಪೇಟೆ ತಾಲ್ಲೂಕು ಅರಮೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಸಮ್ಮೇಳನದ ಅಂಗವಾಗಿ ಆಯೋಜಿಸಿದ್ದ ಸಭೆಯಲ್ಲಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ‘ಶರಣ ಸಾಹಿತ್ಯ ಸಮ್ಮೇಳನ ಕೇವಲ ಸಮುದಾಯವೊಂದಕ್ಕೆ ಸೀಮಿತವಾದುದಲ್ಲ. ಶರಣ ಸಾಹಿತ್ಯವನ್ನು ಜನಸಾಮಾನ್ಯರ ಮನೆ– ಮನಕ್ಕೆ ತಲುಪಿಸುವುದೇ ಈ ಸಮ್ಮೇಳನದ ಮೂಲ ಉದ್ದೇಶವಾಗಿದೆ’ ಎಂದು ಹೇಳಿದರು.

ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ‘ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಆಯೋಜನೆಯಾಗುತ್ತಿದ್ದು, ಎಲ್ಲರೂ ಸೇರಿ ಸಮ್ಮೇಳನ ಯಶಸ್ವಿಗೊಳಿಸಬೇಕು. ಸಮಯಪಾಲನೆಗೆ ಒತ್ತು ಕೊಡಬೇಕು. ಮುಂದಿನ ಸಮ್ಮೇಳನಗಳಿಗೆ ಮಾದರಿ ಆಗುವ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಕೊಡಗು ಜಿಲ್ಲೆಗೆ ಆಗಮಿಸುವ ಸುತ್ತೂರು ಶ್ರೀಗಳನ್ನು ಗೌರವಗಳಿಂದ ಆದರಿಸಿ ಬೀಳ್ಕೊಡುವ ವ್ಯವಸ್ಥೆ ಮಾಡಬೇಕು’ ಎಂದರು.

ತೊರೆನೂರು ವಿರಕ್ತ ಮಠದ ಸದಾಶಿವ ಸ್ವಾಮೀಜಿ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ವಿ.ಶಿವಪ್ಪ, ಪ್ರಧಾನ ಕಾರ್ಯದರ್ಶಿ ಶಾಂಬ ಶಿವಯ್ಯ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಕುಶಾಲನಗರ ತಾಲ್ಲೂಕು ಅಧ್ಯಕ್ಷ ಎಂ.ಎಸ್. ಶಿವಾನಂದ, ಸೋಮವಾರ ಪೇಟೆ ತಾಲ್ಲೂಕು ಅಧ್ಯಕ್ಷ ಎ. ಎಸ್. ಮಹೇಶ್, ಜಿಲ್ಲಾ ಕದಳಿ ವೇದಿಕೆ ಅಧ್ಯಕ್ಷೆ ಸರೋಜಾ ಆರಾಧ್ಯ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-51-1475869938

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.