ಮಡಿಕೇರಿ: ಸಮೂಹ ನೃತ್ಯ, ಹಾಡುಗಾರಿಕೆ, ನಾಟಕ, ಏಕ ಪಾತ್ರಾಭಿನಯ, ರಂಗೋಲಿ, ಫಯರ್ ಲೆಸ್ ಕುಕ್ಕಿಂಗ್, ಚರ್ಚಾ ಕೂಟ ಹೀಗೆ ಒಂದಾದ ಮೇಲೆ ಒಂದರಂತೆ ವೇದಿಕೆ ಮೇಲೆ ಕಾರ್ಯಕ್ರಮಗಳು ಜರುಗುತ್ತಿದ್ದರೆ ಪ್ರೇಕ್ಷಕರು ತದೇಕಚಿತ್ತದಿಂದ ವೀಕ್ಷಿಸಿದರು.

ಈ ದೃಶ್ಯಗಳು ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಶನಿವಾರ ನಡೆದ ಪ್ರತಿಭಾನ್ವೇಷಣೆಯ ಕಲೆಯ ಹಬ್ಬ ‘ಕಲಾ ವೈಭವ’ದಲ್ಲಿ ಕಂಡು ಬಂತು. ಇದರಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡು ಗಮನ ಸೆಳೆದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ., ‘ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿಯಾಗಿದೆ. ಕಲೆಯ ಅನಾವರಣಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಹೇಳಿದರು.

ಕಾಲೇಜು ವಿದ್ಯಾರ್ಥಿ ಸಂಘದ ಸಂಚಾಲಕ ಡಾ.ಶ್ರೀಧರ್ ಹೆಗಡೆ ಮಾತನಾಡಿ, ‘ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಯ ‘ಕಲಾ ವೈಭವ’ ಕಾರ್ಯಕ್ರಮದ ಆಯೋಜನೆ ಇತರರಿಗೆ ಮಾದರಿಯಾಗಿದೆ ಮತ್ತು ಹೆಮ್ಮೆಯ ವಿಚಾರವಾಗಿದೆ’ ಎಂದು ಶ್ಲಾಘಿಸಿದರು.

‘ಇಂತಹ ವೇದಿಕೆಗಳ ಮೂಲಕ ಕೌಶಲ್ಯವನ್ನು ಇತರರಿಗೂ ಪರಿಚಯಿಸಿ ಮುಂದಿನ ಪೀಳಿಗೆಗೂ ಇದನ್ನು ಹಸ್ತಾಂತರಿಸಬೇಕು ಎಂದು ಸಲಹೆ ನೀಡಿದರು ಮಾತ್ರವಲ್ಲ, ಕಲಾ ವಿಭಾಗದ ವಿದ್ಯಾರ್ಥಿಗಳು ಶೈಕ್ಷಣಿಕ ಕೀಳರಿಮೆ ಹೊಂದದೆ ಉನ್ನತ ಸಾಧನೆ ಮಾಡಬೇಕು’ ಎಂದರು.

ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಡಾ.ಕೃಷ್ಣ ಮಾತನಾಡಿ, ‘ಕಾಲೇಜು ಪ್ರಗತಿ ಪಥದಲ್ಲಿ ಸಾಗಲು ಇಂತಹ ಕಾರ್ಯಕ್ರಮಗಳು ಸಹಕಾರಿ’ ಎಂದರು.

ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ನಯನ ಕಶ್ಯಪ್ ಮಾತನಾಡಿ, ‘ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರತಿಬಿಂಬಿಸಲು ಸೂಕ್ತ ವೇದಿಕೆಯ ಅಗತ್ಯವಿರುತ್ತದೆ, ಕೆಲವೊಮ್ಮೆ ವೇದಿಕೆ ಸಿಗದೆ ವಿದ್ಯಾರ್ಥಿಗಳು ವಂಚಿತರಾಗುತ್ತಾರೆ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಪ್ರತಿಭೆಗಳಿಗೆ ಜೀವ ಕಳೆ ತುಂಬಿದಂತಾಗುತ್ತದೆ’ ಎಂದರು.

ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ತಿಪ್ಪೇಸ್ವಾಮಿ, ಕಾರ್ಯಕ್ರಮದ ಸಂಚಾಲಕಿ ಎ.ಎನ್.ಗಾಯತ್ರಿ, ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ಎಂ.ಪಿ.ಡೀನಾ, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಎ.ಎನ್.ಮೋನಿಕಾ, ಸೂಕ್ಷ್ಮಾಣು ವಿಭಾಗದ ಉಪನ್ಯಾಸಕಿ ಸೌಮ್ಯ ಕೃಷ್ಣಮೂರ್ತಿ, ಭೂಗೋಳ ವಿಭಾಗದ ಉಪನ್ಯಾಸಕಿ ಬೈರವಿ, ವಿದ್ಯಾರ್ಥಿ ಸಂಘಟನೆಯ ಸಂಚಾಲಕಿ ಟಿ.ವಿ.ವರ್ಷ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-51-1575197636

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.