ಮಳವಳ್ಳಿ: ಸಾಮಾಜಿಕ ಜಾಲತಾಣಗಳ ಮಿತಿಮೀರಿದ ಬಳಕೆ ಜಾನಪದ ಕಲೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಅಮೂಲ್ಯವಾದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸಿ ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ಮಾಡುತ್ತಿರುವ ಜೋಳಿಗೆ ಟ್ರಸ್ಟ್ ಕಾರ್ಯ ಶ್ಲಾಘನೀಯ ಎಂದು ಸಾಹಿತಿ ಸುಂದ್ರಪ್ಪ ತಿಳಿಸಿದರು.

ಡಾ.ಬಿ.ಆರ್.ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶನಿವಾರ ಕುಂತೂರಿನ ಜೋಳಿಗೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಆಯೋಜಿಸಿದ್ದ ‘ಜಾನಪದ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ನಾಗರತ್ನಮ್ಮ ಮಾತನಾಡಿ, ಮೊದಲಿಗೆ ಮೌಖಿಕವಾಗಿ ಮನೆ ಮಾತಾಗಿದ್ದ ಜಾನಪದ ಸಾಹಿತ್ಯ ನಂತರದ ದಿನಗಳಲ್ಲಿ ಲಿಖಿತ ರೂಪ ಪಡೆದು, ಇಂದು ಅಳಿವಿನ ಅಂಚಿನ ಕಡೆಗೆ ಸಾಗುತ್ತಿದೆ. ಸತ್ಯ, ನೀತಿ, ಮಾನವೀಯ ಮೌಲ್ಯಗಳನ್ನು ಸಾರುವ ಜಾನಪದ ಪರಂಪರೆಯನ್ನು ಪುನಶ್ಚೇತನ ಗೊಳಿಸುವ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು.

ಕಲಾವಿದರಿಂದ ಜಾನಪದ ಗೀತಾ ಗಾಯನ, ತಮಟೆ, ನಗಾರಿ, ಪೂಜಾ ಕುಣಿತ ಮತ್ತು ವೀರಗಾಸೆ ಪ್ರದರ್ಶನ ಕಾರ್ಯಕ್ರಮಗಳು ಗಮನ ಸೆಳೆದವು. ಸಾಹಿತಿ ನಾಗರತ್ನಮ್ಮ ಅವರನ್ನು ಟ್ರಸ್ಟ್ ವತಿಯಿಂದ ಅಭಿನಂದಿಸಲಾಯಿತು.

ಟ್ರಸ್ಟ್ ಅಧ್ಯಕ್ಷ ಗುರುಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಚೇತನ್ ಕುಮಾರ್, ಮುಖಂಡರಾರ ಎಂ.ಎನ್. ಜಯರಾಜು, ಹುಸ್ಕೂರು ಕುಮಾರ್, ಕುಶಾಲ್, ಬಿ.ಕೆ.ಕುಮಾರ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-40-458369142

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.