ಮಂಡ್ಯ: ಕರ್ನಾಟಕ ಸಂಘದಿಂದ ಕೊಡ ಮಾಡುವ ಒಂದನೇ ವರ್ಷದ ತಾಯಮ್ಮ ಹನಕೆರೆ ಕೆ.ಬೋರಯ್ಯ ಸಮಾಜಮುಖಿ ಪುರಸ್ಕಾರ ಪ್ರಶಸ್ತಿ ಸಮಾರಂಭವು ಮೇ 4ರಂದು ಸಂಜೆ 5 ಗಂಟೆಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಕರ್ನಾಟಕದ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಹೇಳಿದರು.

ಕಣ್ವ ಫೌಂಡೇಷನ್ನ ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಎಂ. ವೆಂಕಟಪ್ಪ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಕರ್ನಾಟಕ ಸಂಘದ ನಿರ್ದೇಶಕ ಎಚ್.ಬಿ. ನಾಗಪ್ಪ ಅವರ ತಾಯಿ ತಾಯಮ್ಮ ಹಾಗೂ ತಂದೆ ಹನಕೆರೆ ಕೆ.ಬೋರಯ್ಯ ಹೆಸರಿನಲ್ಲಿ ₹20 ಸಾವಿರ ನಗದು ಮತ್ತು ಫಲಕದೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶಸ್ತಿ ಪ್ರದಾನ ಮಾಡುವರು. ಮಾಜಿ ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಅಭಿನಂದನಾ ನುಡಿಯಾಡುವರು ಎಂದರು. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ರಾಮಕೃಷ್ಣ, ಮನ್ಮುಲ್ ನಿರ್ದೇಶಕ ಬಿ.ಆರ್. ರಾಮಚಂದ್ರ, ಪ್ರಶಸ್ತಿ ಪುರಸ್ಕೃತ ಎಚ್.ಎಂ. ವೆಂಕಟಪ್ಪ ಭಾಗವಹಿಸುವರು ಎಂದು ತಿಳಿಸಿದರು. ಸಂಘದ ಕಾರ್ಯದರ್ಶಿ ಚಂದಗಾಲು ಪಿ.ಲೋಕೇಶ್, ಖಜಾಂಚಿ ಮಂಜುಳಾ ಉದಯಶಂಕರ್, ನಿರ್ದೇಶಕರಾದ ಎಚ್.ಬಿ. ನಾಗಪ್ಪ ಹನಕೆರೆ, ಎ.ಜೆ.ವತ್ಸಲಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-40-39758277

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.