ಮುಂಡಗೋಡ: ‘ನಾಡು, ನುಡಿಯ ವಿಚಾರದಲ್ಲಿ ಸಾಹಿತ್ಯ ಪರಿಷತ್ತಿನ ಕೊಡುಗೆ ಅಪಾರ. ನೆಲ, ಜಲದ ವಿಷಯ ಬಂದಾಗ ಸಾಹಿತ್ಯ ಪರಿಷತ್ತು ಒಂದು ಹೆಜ್ಜೆ ಮುಂದೆ ಇಟ್ಟು, ನಾಡು ಕಟ್ಟುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿದೆ’ ಎಂದು ಚಿಂತಕ ಸುರೇಶ ಕಲ್ಲೋಳ್ಳಿ ಹೇಳಿದರು.

ಇಲ್ಲಿನ ನಿವೃತ್ತ ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು.

‘ಕರ್ನಾಟಕವಷ್ಟೇ ಅಲ್ಲದೇ ನೆರೆಯ ಆಂಧ್ರಪ್ರದೇಶ, ಮಹಾರಾಷ್ಟ್ರ, ದೆಹಲಿಯಲ್ಲಿಯೂ ಕೂಡ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿ ಕನ್ನಡದ ಕಂಪನ್ನು ಪಸರಿಸುವ ಕೆಲಸವನ್ನು ಮಾಡಿದೆ. ಮಹಿಳಾ ಸಾಹಿತಿಗಳಿಗೂ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ನೀಡುವ ಮೂಲಕ, ಮಹಿಳಾ ಸಾಹಿತಿಗಳಿಗೂ ಗೌರವ ಕೊಡುವಂತ ಕೆಲಸ ಮಾಡಿದೆ’ ಎಂದು ಹೇಳಿದರು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುಭಾಷ್ ಡೋರಿ ಉದ್ಘಾಟಿಸಿ, ‘ಕನ್ನಡ ಭಾಷೆಯ ಮಹತ್ವವನ್ನು ಎಲ್ಲರಿಗೂ ತಿಳಿಸುವಂತ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ. ಮಾತೃಭಾಷೆಯನ್ನು ಗೌರವಿಸಿ, ಅನ್ಯಭಾಷಿಕರಿಗೂ ಕನ್ನಡ ಕಲಿಸುವ ಕೆಲಸ ಮಾಡಬೇಕು’ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ವಸಂತ ಕೊಣಸಾಲಿ ಮಾತನಾಡಿ, ‘ವಿದ್ಯಾರ್ಥಿಗಳು ಇಂಗ್ಲಿಷ್, ಫ್ರೆಂಚ್, ಜರ್ಮನಿ ಯಾವುದೇ ಭಾಷೆಯನ್ನು ಕಲಿತರೆ ಪರವಾಗಿಲ್ಲ. ಆದರೆ, ತಾಯಿ ಭಾಷೆಯಾದ ಕನ್ನಡವನ್ನು ಮರೆಯದೆ ಮನೆಯಲ್ಲಿ ಹಾಗೂ ವ್ಯವಹಾರದಲ್ಲಿ ಬಳಸಬೇಕು’ ಎಂದು ಆತಂಕ ವ್ಯಕ್ತಪಡಿಸಿದರು.

ಎಸ್.ಕೆ.ಬೋರ್ಕರ, ಪ್ರವೀಣ ತಟ್ಟಿ, ನಾಗರಾಜ ಅರ್ಕಸಾಲಿ, ಸುಭಾಷ್ ವಡ್ದರ, ಆನಂದ ಹೊಸೂರ, ಸಿ.ಎನ್.ಸುರಕೋಡ, ಮಂಜುನಾಥ ಕಂಬಿ, ವಿನಾಯಕ ಶೇಟ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-20-1804146075

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.