ಬಸವನಬಾಗೇವಾಡಿ: ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಸಾಹಿತ್ಯಕ್ಕೆ ಮೈಸೂರು ಸಂಸ್ಥಾನದ ಅರಸ ನಾಲ್ವಡಿ ಕೃಷ್ಣರಾಜ ಒಡೆಯರ ಅವರ ಕೊಡುಗೆ ಅಪಾರವಾಗಿದ್ದು, ಅವರು ಕರುನಾಡಿನ ಸಾಕ್ಷಿಪ್ರಜ್ಞೆ ಎಂದು ವಿಶ್ರಾಂತ ಅಧ್ಯಾಪಕ ಸಿ.ಎಲ್.ಮುರಾಳ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದಿಂದ ಪಟ್ಟಣದ ಐತಿಹಾಸಿಕ ಬಸವೇಶ್ವರ ದೇವಾಲಯದ ಉದ್ಯಾನವನದಲ್ಲಿ ಇತ್ತಿಚೆಗೆ ಹಮ್ಮಿಕೊಂಡಿದ್ದ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಕಸಾಪ ಮಹಿಳಾ ಪ್ರತಿನಿಧಿ ಮಹಾದೇವಿ ಬಿರಾದಾರ ಮಾತನಾಡಿ, ಕನ್ನಡ ನೆಲ, ಜಲ ಹಾಗೂ ಭಾಷೆಗೆ ಸುದೀರ್ಘ ಇತಿಹಾಸವಿದೆ. ಕನ್ನಡ ಪ್ರಥಮ ಭಾಷೆಯಾಗಿದ್ದರೂ ಇಂದಿನ ಯುವಪೀಳಿಗೆ ಇಂಗ್ಲಿಷ್ ಭಾಷೆಯ ಮೇಲೆ ಹೆಚ್ಚು ವ್ಯಾಮೋಹ ತೋರುತ್ತಿರುವುದು ಖೇದಕರ. ನಾವೆಲ್ಲಾ ನಮ್ಮ ಮಕ್ಕಳಲ್ಲಿ ಕನ್ನಡ ಭಾಷಾಭಿಮಾನ ಬೆಳಸಲು ಮುಂದಾಗಬೇಕು ಎಂದರು.

ಎಸ್.ಕೆ.ಸೋಮನಕಟ್ಟಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ನೂರಾರು ವರ್ಷಗಳಿಂದ ಕನ್ನಡ ಕಟ್ಟುವ ಕೆಲಸದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ ಎಂದು ಸ್ಮರಿಸಿದರು. ಷಣ್ಮುಖಪ್ಪ ಅಂಬಲಿ, ಕಸಾಪ ತಾಲ್ಲೂಕು ಅಧ್ಯಕ್ಷ ಶಿವಾನಂದ ಡೋಣೂರ ಮಾತನಾಡಿದರು.

ಈ ವೇಳೆ ಎಂ.ಎನ್.ಅಂಗಡಗೇರಿ, ಎಸ್.ಬಿ.ಅಂಕದ, ಬಸವರಾಜ ಮೇಟಿ, ಶ್ರೀಶೈಲ ಶಿರಗುಪ್ಪಿ, ಎಸ್.ಆರ್.ಮಠ, ಬಾಬು ವಾಡೇದ, ಶಿಕ್ಷಕರಾದ ಶರಣು ದಳವಾಯಿ, ಬಸವರಾಜ ಚಿಂಚೊಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-26-1945366254

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.