ಬೈಂದೂರು: ಕತಾರ್ನ ದೋಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಅಲ್ಲಿನ ಭಾರತೀಯ ಸಾಂಸ್ಕೃತಿಕ ಕೇಂದ್ರದ(ಐಸಿಸಿ) ವ್ಯವಸ್ಥಾಪಕ ಸಮಿತಿಯ ಸದಸ್ಯರನ್ನು ಈಚೆಗೆ ಸನ್ಮಾನಿಸಲಾಯಿತು.

2023–24ನೇ ಸಾಲಿನಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕರ್ನಾಟಕದ ಬೈಂದೂರು ಮೂಲದ ಸುಬ್ರಹ್ಮಣ್ಯ ಹೆಬ್ಬಾಗಿಲು ಹಾಗೂ ವ್ಯವಸ್ಥಾಪಕ ಸಮಿತಿಯ ಸದಸ್ಯರನ್ನು ಸನ್ಮಾನಿಸಿ ಪ್ರಮಾಣಪತ್ರಗಳನ್ನು ಪ್ರದಾನ ಮಾಡಲಾಯಿತು. ಭಾರತೀಯ ಸಮುದಾಯಕ್ಕೆ ನೀಡಿದ ವಿಶಿಷ್ಟ ಮತ್ತು ನಿಸ್ವಾರ್ಥ ಸೇವೆಗಾಗಿ ಸಮಿತಿಯ ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಕಳೆದ ಎರಡು ದಶಕಗಳಿಂದ ಕತಾರ್ನಲ್ಲಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಸದ್ಯ ಕತಾರ್ನ ಕರ್ನಾಟಕ ಸಂಘದ ಅಧ್ಯಕ್ಷರಾಗಿದ್ದಾರೆ.

ಕಾರ್ಯಕ್ರಮದಲ್ಲಿ ಭಾರತೀಯ ರಾಯಭಾರ ಕಚೇರಿಯ ಕಾನ್ಸುಲರ್ ಡಾ.ವೈಭವ್ ಎ.ತಂಡಲೆ, ಕತಾರ್ನಲ್ಲಿನ ಭಾರತದ ರಾಯಭಾರಿ ವಿಪುಲ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-28-1308561903

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.