ರಾಯಚೂರು: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದಿಂದ ತಾಲ್ಲೂಕಿನ ಮಟಮಾರಿ ಗ್ರಾಮದಲ್ಲಿ ‘ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ’ ಘೋಷ ವಾಕ್ಯದಡಿ ನಡೆಯುತ್ತಿರುವ 2025-26ನೇ ಸಾಲಿನ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಗ್ರಾಮಾಭ್ಯುದಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಗ್ರಾಮಾಭಿವೃದ್ಧಿಗೆ ಪೂರಕವಾಗುವ ಹಲವು ವಿಷಯಗಳ ಕುರಿತು ತಜ್ಞರು ಮತ್ತು ಉಪನ್ಯಾಸಕರು ಗ್ರಾಮಸ್ಥರಿಗೆ, ಯುವಜನತೆಗೆ ಉಪಯುಕ್ತ ಮಾಹಿತಿ ನೀಡಿದರು.

ಉಪನ್ಯಾಸಕ ವೀರಾಂಜನೇಯ ಐತಿಹಾಸಿಕ ತಾಣಗಳು, ಧಾರ್ಮಿಕ ಪರಂಪರೆ ಮತ್ತು ಗ್ರಾಮೀಣಾಭಿವೃದ್ಧಿ’ ವಿಷಯದ ಕುರಿತು ಉಪನ್ಯಾಸ ನೀಡಿದರು. ಉಪನ್ಯಾಸಕ ಶಿವಪುತ್ರಪ್ಪ ಅವರು ‘ಭಾರತೀಯ ಸಂವಿಧಾನ ಹಾಗೂ ಗ್ರಾಮಾಭ್ಯುದಯದ ನಿಬಂಧನೆಗಳು’ ವಿಷಯವಾಗಿ ಮಾತನಾಡಿದರು.

ರಾಜೋಳ್ಳಿಯ ಸ್ವಾಮಿ ವಿವೇಕಾನಂದ ಶಾಲೆಯ ಸಂಸ್ಥಾಪಕ ಆಂಜನೇಯ ಅವರು ‘ದೇಶ ಕಟ್ಟುವಿಕೆಯಲ್ಲಿ ಯುವಜನತೆಯ ಪಾತ್ರ’ ಕುರಿತು ಉಪನ್ಯಾಸ ನೀಡಿದರು. ಶಿಬಿರಾಧಿಕಾರಿ ಸಂತೋಷಕುಮಾರ ರೇವೂರ ಅವರು ‘ಸ್ವಸ್ಥ ಗ್ರಾಮ–ಸಮೃದ್ಧ ಭಾರತ’ ವಿಷಯವಾಗಿ ಮಾತನಾಡಿದರು. ಉಪನ್ಯಾಸಕ ಶರಣಗೌಡ ಅವರು ‘ಗ್ರಾಮೀಣಾಭಿವೃದ್ಧಿಯಲ್ಲಿ ಅಂತರ್ಜಾಲ ಹಾಗೂ ಡಿಜಿಟಲ್ ಸಾಕ್ಷರತೆಯ ಅಗತ್ಯತೆ ಮತ್ತು ಪಾತ್ರ’ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-32-820480639

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.