ಧಾರವಾಡ: ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನೀಡುವ ‘ರಾಜಗುರು’ ಪ್ರಶಸ್ತಿಯು ಹಿಂದೂಸ್ತಾನಿ ಗಾಯಕ ಪಂಡಿತ್ ಎಂ.ವೆಂಕಟೇಶಕುಮಾರ ಅವರಿಗೆ ಲಭಿಸಿದೆ.

ರಾಜಗುರು ಅವರ 101ನೇ ಜನ್ಮದಿನ ಸಂದರ್ಭದಲ್ಲಿ ನೀಡಲಾಗುತ್ತಿರುವ ಈ ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಇವರೊಂದಿಗೆ ಯುವ ಪ್ರಶಸ್ತಿಯು ವಿಜಯಪುರದ ಯುವ ಗಾಯಕಿ ಕೃತಿಕಾ ಜಂಗಿನಮಠ ಹಾಗೂ ಕೋಲ್ಕತ್ತಾದ ತಬಲಾ ವಾದಕಿ ರಿಂಪಾ ಶಿವಾ ಅವರಿಗೆ ಲಭಿಸಿದೆ. ಈ ಪ್ರಶಸ್ತಿಯು ತಲಾ ₹25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಅ.4ರಂದು ನಗರದ ಸೃಜನಾ ರಂಗಮಂದಿರದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.