ರೋಣ: ಕನ್ನಡ ಭಾಷೆಯು ಅತ್ಯಂತ ಸರಳವಾಗಿದ್ದು, ವಿದ್ಯಾರ್ಥಿಗಳು ಅದರಲ್ಲಿ ಗರಿಷ್ಠ ಅಂಕಗಳನ್ನು ಪಡೆಯುವುದು ಸಾಧ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎನ್. ಕಂಬೋಗಿ ಹೇಳಿದರು.

ಪಟ್ಟಣದ ಸಾಹಿತ್ಯ ಭವನದಲ್ಲಿ ಮಂಗಳವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡವನ್ನು ರಾಜಮಹಾರಾಜರು ಪೋಷಿಸಿದ್ದು, ಕವಿಗಳು ಅದನ್ನು ಶ್ರೀಮಂತಗೊಳಿಸಿದ್ದಾರೆ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿ ಅತ್ಯಂತ ಸಮೃದ್ಧವಾಗಿದ್ದು, ಅದರ ಸಂವರ್ಧನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ‘ಕವಿವಾಣಿ ಹೂ, ಜನವಾಣಿ ಬೇರು’ ಎಂಬ ಮಾತಿನಂತೆ ಕನ್ನಡ ಬೆಳೆಯಬೇಕು ಎಂದು ಅವರು ಅಭಿಪ್ರಾಯಪಟ್ಟರು.

ನಾಡಿನ ಇತಿಹಾಸದಲ್ಲಿ ಜೈನಧರ್ಮದ ಕೊಡುಗೆ ಅಪಾರವಾಗಿದ್ದು, ಶ್ರವಣಬೆಳಗೊಳದ ಶಾಸನಗಳು ಮತ್ತು ಶಿಲ್ಪಕಲೆಗಳು ಕನ್ನಡದ ವೈಭವದ ಸಾಕ್ಷಿಗಳಾಗಿವೆ. ಅವುಗಳನ್ನು ಸಂರಕ್ಷಿಸಿ ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿದ್ದ ಹಿರಿಯ ಸಾಹಿತಿ ವಿ.ಕೆ.ಪಾಟೀಲ, ಕನ್ನಡ ಸಾಹಿತ್ಯ ಪರಿಷತ್ ನಡೆದು ಬಂದ ದಾರಿ ಕುರಿತು ಮಾತನಾಡಿ, ಕನ್ನಡಕ್ಕೆ ಲಭಿಸಿರುವ ಎಂಟು ಜ್ಞಾನಪೀಠ ಪ್ರಶಸ್ತಿಗಳು ಅದರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಪೂರ್ಣ ಅಂಕ ಪಡೆದ ತಾಲ್ಲೂಕಿನ 10 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪತ್ರಿಕೋದ್ಯಮದ ಸಂಗಮೇಶ ಮೆಣಸಗಿ, ಭಜನಾ ಗಾಯಕ ಯಲ್ಲಪ್ಪ ಕೆಂಚನಗೌಡ್ರ, ಜನಪದ ಗಾಯಕ ಶಿವಯೋಗಿ ನೀಲಗುಂದ, ಸಾಹಿತಿ ಶಿವಾನಂದ ಹುನಗುಂಡಿ ಹಾಗೂ ಭಕ್ತಿ ಗಾಯಕ ವೀರಪ್ಪ ಪಲ್ಲೇದ ಅವರನ್ನು ಸನ್ಮಾನಿಸಲಾಯಿತು.

ಸಂಘಟನಾ ಕಾರ್ಯದರ್ಶಿ ಪಿ. ಬಿ. ಪಾಟೀಲ, ಶಿವಪ್ರಕಾಶ ಹಿರೇಮಠ, ಎಂ, ಎಸ್. ಪಾಟೀಲ, ರಮಾಕಾಂತ ಕಮತಗಿ, ಅಬ್ಬಿಗೇರಿಯ ಪೋಷಕರ ಪ್ರತಿನಿಧಿ ಮಹಾದೇವಿ ತಳವಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-23-1206820078

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.