ಶಿವಮೊಗ್ಗ: ‘ಜಗತ್ತು ದ್ವೇಷ ಅಸೂಯೆಗಳ ಅಗ್ನಿಕುಂಡದಲ್ಲಿ ಬೇಯುತ್ತಿರುವ ಈ ಹೊತ್ತಿನಲ್ಲಿ ವಿವೇಕವುಳ್ಳ ಸಮಾಜ ನಿರ್ಮಾಣದ ಅಗತ್ಯವಿದೆ. ತುರ್ತಾಗಿ ಬೇಕಿ ರುವ ದಯೆಯನ್ನು ಸೃಷ್ಟಿಸುವ ಸಾಂಸ್ಕೃತಿಕ ಜಗತ್ತನ್ನು ಕಟ್ಟುವತ್ತ ನಾವೆಲ್ಲಾ ಚಿಂತನೆ ನಡೆಸಬೇಕಿದೆ’ ಎಂದು ತುಮಕೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವ ಮೋಹನ ಚಂದ್ರಗುತ್ತಿ ಅಭಿಪ್ರಾಯಪಟ್ಟರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸಂಜೆ ಕಾಲೇಜು ಸಂಯುಕ್ತವಾಗಿ ಆಯೋಜಿಸಿದ್ದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳ ‘ಕನ್ನಡ ನುಡಿ ಉತ್ಸವ’ವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

‘ಭಾಷೆ, ಜಾತಿ, ಧರ್ಮದ ಹೆಸರಲ್ಲಿ ಅಸಹನೆ ಹೆಚ್ಚುತ್ತಿರುವ ಕಾಲಘಟ್ಟದಲ್ಲಿ ಬದುಕುತ್ತಿರುವ ಮಕ್ಕಳನ್ನು ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನ ಕಡೆಗೆ ನಡೆಸಬೇಕಿದೆ. ಮನಸ್ಸುಗಳನ್ನು ಕಟ್ಟುವ ಕಾಯಕದಿಂದ ಮಾತ್ರ ಇದು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.

‘ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಮೊಬೈಲ್ ಫೋನ್ ಕಸಿದುಕೊಂಡಿದೆ. ಅದು ಅವರ ಮನಸ್ಸಿನಲ್ಲಿ ದ್ವೇಷ ಮತ್ತು ಅಸಹನೆ ತುಂಬುತ್ತಿದೆ. ಬಹುಬೇಗ ಉದ್ವಿಗ್ನಗೊಳ್ಳುವ ಮನಃಸ್ಥಿತಿ ಅವರಲ್ಲಿ ಬೆಳೆಯುತ್ತಿದೆ. ಸಾಂಸ್ಕೃತಿಕವಾಗಿ ಮನಸ್ಸನ್ನು ಜಾಗೃತಗೊಳಿಸುವುದೇ ಇದಕ್ಕಿರುವ ಪರಿಹಾರ’ ಎಂದು ಹೇಳಿದರು.

‘ನಮ್ಮ ಜೀವನ ಕ್ರಮದಲ್ಲಿಯೇ ನಮ್ಮ ಸಂಸ್ಕೃತಿ ಹಾಸುಹೊಕ್ಕಾಗಿದೆ. ನಮ್ಮ ಸಾಂಸ್ಕೃತಿಕ ಆಚರಣೆಗಳ ಮೇಲೆ ಅನೇಕ ದಾಳಿಗಳು ಆಗಿವೆ. ಆದರೆ ಅವುಗಳನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಾಗಿಲ್ಲ. ಬದಲಾಗಿ ಮತ್ತಷ್ಟು ಗಟ್ಟಿಯಾಗಿವೆ’ ಎಂದು ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆದ ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.

ಕಾಲೇಜಿನ ಪ್ರಾಚಾರ್ಯ ಎಸ್. ಶಶಿಧರ್ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ಅಣ್ಣಪ್ಪ ಎನ್. ಮಳೀಮಠ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಐಕ್ಯೂಎಸಿ ಸಂಚಾಲಕಿ ವಿದ್ಯಾ ಮರಿಯಾ ಜೋಸೆಫ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-42-671414532

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.