ಸಿದ್ದಾಪುರ: ‘ಪಾಶ್ಚಾತ್ಯ ಸಂಸ್ಕೃತಿಯತ್ತ ಯುವ ಪೀಳಿಗೆ ಆಕರ್ಷಿತರಾಗುತ್ತಿರುವ ಇಂದಿನ ಕಾಲದಲ್ಲಿ ಜಾನಪದ ಕಲೆ ಹಾಗೂ ನಮ್ಮ ಸಂಸ್ಕೃತಿಯನ್ನು ಪ್ರೋತ್ಸಾಹಿಸಿ ಉಳಿಸಿ ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದು ಪ್ರಗತಿಪರ ಕೃಷಿಕ ಚಂದ್ರಶೇಖರ ನರಸಿಂಹ ಹೆಗಡೆ ಹೊನ್ನೆಹದ್ದ ಹೇಳಿದರು.

ತಾಲ್ಲೂಕಿನ ಹಾರ್ಸಿಕಟ್ಟಾ ಸಮೀಪದ ಹೊನ್ನೆಹದ್ದದ ಶ್ರೀ ಮಾವಿನಕಟ್ಟೆ ಭೂತೇಶ್ವರ ಸ್ವಾಮಿಯ ವಾರ್ಷಿಕೋತ್ಸವದ ಅಂಗವಾಗಿ ಸೋಮವಾರ ಆಯೋಜಿಸಿದ್ದ ಕಡೆವಿನ ಕೋಲಾಟ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.

ಉಪನ್ಯಾಸಕ ಎನ್.ಟಿ.ನಾಯ್ಕ ದೇವಾಸ ಮಾತನಾಡಿ, ‘ಜಾನಪದ ಕಲೆಗಳು ಉಳಿಯಬೇಕಾದರೆ ಸಂಘಟನೆ ಅವಶ್ಯ ಎಂದರು.

ನಾಟಿ ವೈದ್ಯ ಕೆ.ಟಿ.ಗೌಡ ಮಾದಲಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿದ್ರಕಾನ ಗ್ರಾಮ ಪಂಚಾಯಿತಿ ನಿಕಟಪೂರ್ವ ಸದಸ್ಯೆ ಮಮತಾ ನಾರಾಯಣ ಚನ್ನಯ್ಯ, ನಾರಾಯಣ ಸ್ವಾಮಿ ಕೊಳಗಿಜಡ್ಡಿ, ನಿರ್ಣಾಯಕ ಶ್ರೀನಿವಾಸ, ಭೂತೇಶ್ವರ ಸಮಿತಿಯ ಮಂಜುನಾಥ ಹೊನ್ನೆಹದ್ದ ಉಪಸ್ಥಿತರಿದ್ದರು.

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಮೇಶ ಹೆಗಡೆ ಹಾರ್ಸಿಮನೆ ಕಾರ್ಯಕ್ರಮ ನಿರೂಪಿಸಿದರು. ಭೂತೇಶ್ವರ ಸ್ವಾಮಿ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು.

ಕಡೆವಿನ ಕೋಲಾಟ ಪ್ರದರ್ಶನದಲ್ಲಿ ಮಾರುತಿ ಅಂಬೇಡ್ಕರ್ ಯುವಕ ಸಂಘ ಹೆಚ್ಚೆ ಪ್ರಥಮ ಹಾಗೂ ಭೂತೇಶ್ವರ ಗೆಳೆಯರ ಬಳಗ ಉಂಚಳ್ಳಿ ದ್ವಿತೀಯ ಬಹುಮಾನ ಪಡೆದುಕೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-20-162743552

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.