ಸಿಂದಗಿ: ಮಹಾಶಿವಶರಣೆ ಅಕ್ಕಮಹಾದೇವಿ ರಚಿಸಿದ ವಚನಗಳಲ್ಲಿ ಈಗ 354 ವಚನಗಳು ಲಭ್ಯವಾಗಿವೆ. ಅವರು ಕನ್ನಡದ ಪ್ರಥಮ ಕವಯತ್ರಿಯಾಗಿದ್ದಾರೆ ಎಂದು ಜಗದೇವಿ ಬಿರಾದಾರ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕ ಹಮ್ಮಿಕೊಂಡಿದ್ದ ಮಹಾಶಿವರಣೆ ಅಕ್ಕಮಹಾದೇವಿ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ವಕೀಲೆ ಬಿ.ಜಿ. ಮಾನ್ವಿ ಮಾತನಾಡಿ, ವೈರಾಗ್ಯನಿಧಿ ಅಕ್ಕಮಹಾದೇವಿ ಆಧ್ಯಾತ್ಮಿಕತೆಗೆ ಹೊಸ ಭಾಷ್ಯ ಬರೆದರು. ಲೌಕಿಕ ಜಗತ್ತನ್ನು ಧಿಕ್ಕರಿಸಿದರು ಎಂದು ತಿಳಿಸಿದರು.

ಅಕ್ಕಮಹಾದೇವಿ ವಚನಗಳನ್ನು ಶಿಕ್ಷಕಿ ಸೈನಾಬಿ ಮಸಳಿ ಗಾಯನ ರೂಪದಲ್ಲಿ ಪ್ರಸ್ತುತಪಡಿಸಿದರು. ಮಹಾನಂದ ಬಮ್ಮಣ್ಣಿ, ಸುನಂದಾ ಯಂಪೂರೆ, ಶಿಕ್ಷಕಿ ಶೋಭಾ ಚಿಗರಿ, ಅನುಸೂಯ ಪಾರಗೊಂಡ, ವರ್ಷಾ ಪಾಟೀಲ ಮಾತನಾಡಿದರು.

ಕ.ಸಾ.ಪ ತಾಲ್ಲೂಕು ಘಟಕದ ಅಧ್ಯಕ್ಷ ವೈ.ಸಿ.ಮಯೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ.ಸಾ.ಪ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ತಾಲ್ಲೂಕು ಘಟಕದ ಗೌರವ ಕಾರ್ಯದರ್ಶಿ ಆನಂದ ಶಾಬಾದಿ, ಯಂಕಪ್ಪ ನಾಟೀಕಾರ, ರಾಗರಂಜಿನಿ ಸಂಗೀತ ಅಕಾಡೆಮಿ ಸಂಚಾಲಕ ಪ್ರಕಾಶ ಮೂಡಲಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-26-207195729

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.