ಉಡುಪಿ: ‘ಚಿಂತನೆಗಳಲ್ಲಿ ವೈಜ್ಞಾನಿಕತೆಯನ್ನು ಉಳಿಸಿಕೊಂಡಿದ್ದ ಶಿವರಾಮ ಕಾರಂತರು ಇಳಿ ವಯಸ್ಸಿನಲ್ಲಿಯೂ ಬದುಕಿನ ಕುರಿತು ಹೊಂದಿದ್ದ ಉತ್ಸಾಹ ಹಾಗೂ ಕೆಲಸ ನಿಷ್ಠೆ, ಹಿರಿಯ ನಾಗರಿಕರಿಗೆ ಮಾದರಿ’ ಎಂದು ಪತ್ರಕರ್ತ ನಿತ್ಯಾನಂದ ಪಡ್ರೆ ಹೇಳಿದರು.

ಬ್ರಹ್ಮಗಿರಿಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಹಿರಿಯ ನಾಗರಿಕರ ಸಂಘ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕಾರಂತ ಉಪನ್ಯಾಸ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಮಾತನಾಡಿ, ಕಾರಂತರ ಕಾದಂಬರಿಗಳ ಓದುವಿಕೆ ಹಿರಿಯ ನಾಗರಿಕರಲ್ಲಿ ಧೈರ್ಯ ವನ್ನು ಹೆಚ್ಚಿಸುತ್ತದೆ. ಬದುಕು ಬಂದಂತೆ ಸ್ವೀಕರಿಸುವ ಮನೋಭಾವವನ್ನು ಅವರ ಕೃತಿಗಳು ರೂಪಿಸುತ್ತವೆ ಎಂದರು.

ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಕೆ. ಮುರಳೀಧರ್ ಕಾರ್ಯಕ್ರಮ ಉದ್ಘಾಟಿಸಿದರು. ಹಿರಿಯ ನಾಗರಿಕರಿಗಾಗಿ ಆಯೋಜಿಸಿದ್ದ ಲೇಖನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಮಂಜುನಾಥ್ ಕಾಮತ್, ಸಂಕಯ್ಯ ಶೆಟ್ಟಿ ಕೆಂಜೂರು, ದ್ವಿತೀಯ ಸ್ಥಾನ ಪಡೆದ ಡಾ.ಪಿ ಕೃಷ್ಣಪ್ರಸಾದ್, ಗಿರಿಜಾ ಬ್ರಹ್ಮಾವರ ಹಾಗೂ ತೃತೀಯ ಸ್ಥಾನ ಪಡೆದ ಸೋಮಶೇಖರ ರೆಡ್ಡಿ , ಗಿಲ್ಬರ್ಟ್ ಪಿಂಟೋ ಹಾಗೂ ಕರುಣಾ ಸುರೇಶ್ ಪೈ ಅವರಿಗೆ ಬಹುಮಾನ ವಿತರಿಸಲಾಯಿತು.

ಕರ್ನಾಟಕ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಬಸರೂರು ರಾಜೀವ ಶೆಟ್ಟಿ, ಚಿಂತಕ ಮುಷ್ತಾಕ್ ಹೆನ್ನಾಬೈಲ್, ಸದಾನಂದ ಹೆಗ್ಡೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಜಿ.ಎಂ. ಶರೀಫ್ ಹೂಡೆ ಸ್ವಾಗತಿಸಿದರು. ಉಪನ್ಯಾಸಕಿ ಶಾಲಿನಿ ಯು.ಬಿ. ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-28-86236670

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.