ಯಾದಗಿರಿ: ‘ಕನ್ನಡ ಸಾಹಿತ್ಯ ಪರಿಷತ್ತು ನಾಡು, ನುಡಿ, ನೆಲ, ಜಲ ಮತ್ತು ಕನ್ನಡದ ಸಂಸ್ಕೃತಿಯನ್ನು ಕಟ್ಟಿ ಬೆಳೆಸುವ ಉದ್ದೇಶದಿಂದ ಸ್ಥಾಪಿತವಾದ ಸಂಸ್ಥೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಭೀಮರಾಯ ಲಿಂಗೇರಿ ಹೇಳಿದರು.

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಈಚೆಗೆ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಕನ್ನಡ ಸಾಹಿತ್ಯ, ಸಂಸ್ಕೃತಿ ಪ್ರಚಾರ ಮತ್ತು ಪ್ರಸಾರ ಉದ್ದೇಶದಿಂದ ಸ್ಥಾಪಿತವಾದ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಅಸ್ಮಿತೆ ಗಟ್ಟಿಗೊಳಿಸಿದೆ. ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು’ ಎಂದರು.

‘ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸುತ್ತಿದೆ. ಕನ್ನಡ ಸಾಹಿತ್ಯವನ್ನು ನಾಡಿನ ಮೂಲೆ ಮೂಲೆಗಳಲ್ಲಿ ಹಬ್ಬಿಸಲು ಪರಿಷತ್ ಜಿಲ್ಲಾ, ತಾಲ್ಲೂಕು, ವಲಯ ಘಟಕಗಳನ್ನು ಹೊಂದಿದೆ’ ಎಂದು ಹೇಳಿದರು.

ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಪ್ಪ ಎಸ್.ಹೊಟ್ಟಿ ಮಾತನಾಡಿ, ‘ಸಂಸ್ಕೃತಿ ಮತ್ತು ಸಾಹಿತ್ಯ ಬೆಳವಣಿಗೆಗೆ ಪರಿಷತ್ ಸದಾ ಕ್ರಿಯಾಶೀಲವಾಗಿದೆ. ಜಿಲ್ಲಾ ಪರಿಷತ್ತಿನ ವತಿಯಿಂದ ನಲವತ್ತಕ್ಕೂ ಹೆಚ್ಚು ಕನ್ನಡದ ವಿವಿಧ ಪ್ರಕಾರದ ಕೃತಿಗಳನ್ನು ಪ್ರಕಟಣೆಗೊಳಿಸಲಾಗಿದೆ. ಕವಿಗೋಷ್ಠಿ ವಿಚಾರ ಗೋಷ್ಠಿ, ವಿವಿಧ ಪ್ರಕಾರದ ಕಾರ್ಯಕ್ರಮಗಳ ಜೊತೆಗೆ ಸಾಹಿತ್ಯ ಸಮ್ಮೇಳನಗಳನ್ನು ನಡೆಸಿಕೊಂಡು ಬರಲಾಗಿದೆ’ ಎಂದರು.

‘ಮುಂದೆ ಬರುವ ದಿನಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ನೂರಕ್ಕೆ ನೂರು ಅಂಕ ಪಡೆದ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವನ್ನು ಪರಿಷತ್ತಿನ ವತಿಯಿಂದ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೆಂಕಟೇಶ ಕಲಕಂಭ, ಪ್ರಮುಖರಾದ ಆರ್.ಮಹದೇವಪ್ಪಗೌಡ. ಸಿದ್ದರಾಜರೆಡ್ಡಿ, ಎಸ್.ಎಸ್.ನಾಯಕ, ಬಸವಂತ್ರಾಯ ಗೌಡ ಮಾಲಿ ಪಾಟೀಲ, ಸೂರ್ಯಕಾಂತ ಕರದಳ್ಳಿ, ನಾಗಪ್ಪ ಸಜ್ಜನ, ನೂರಂದಪ್ಪ ಲೇವಡಿ, ಚೆನ್ನಪ್ಪ ಸಾಹು, ಶರಣಪ್ಪ ಗುಳಗಿ, ಸ್ವಾಮಿದೇವ ದಾಸನಕೇರಿ ಸೇರಿ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-30-292968284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.