ಹೆಚ್ಚು ಕಡಿಮೆ ಏಳು ದಶಕ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮೆರೆದ ಮಹಾನ್ ತಾರೆ ಬಿ.ಸರೋಜಾದೇವಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಹಲವು ಸವಾಲುಗಳನ್ನು ಮೆಟ್ಟಿ, ವಿಭಿನ್ನ ಪಾತ್ರಗಳಲ್ಲಿ ನಟಿಸಿ ಅಪಾರ ಜನಮನ್ನಣೆಯನ್ನೂ ಗಳಿಸಿಕೊಂಡಿದ್ದರು. ಇವರು ಈಗ ನಮ್ಮೊಂದಿಗಿಲ್ಲ. ಆದರೆ, ಅವರ ನೆನಪುಗಳು ಸದಾ ಹಸಿರು...
ಚಲನಚಿತ್ರ ಅಕಾಡೆಮಿ ಆಯೋಜಿಸಿದ್ದ ‘ಬೆಳ್ಳಿಹೆಜ್ಜೆ’ ಕಾರ್ಯಕ್ರಮದಲ್ಲಿ ತಾವು ನಟಿಸಿದ ಚಿತ್ರಗಳ ಛಾಯಾಚಿತ್ರಗಳನ್ನು ವೀಕ್ಷಿಸುತ್ತಿರುವ ಸರೋಜಾದೇವಿ. ನಟಿ ಜಯಮಾಲ ಇದ್ದಾರೆ.