ಧಾರವಾಡ: ‘ಇಲ್ಲಿನ ನಾಟ್ಯಭೈರವಿ ಕಲಾ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮೇ.31 ರಂದು ಜಾನಪದ ಜಾತ್ರೆ ಹಾಗೂ ಜಿಲ್ಲಾಮಟ್ಟದ ವೈಯಕ್ತಿಕ ಕಿರಿಯರ ನೃತ್ಯ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷ ಸತೀಶ ತುರಮರಿ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿರಂತನ ಗಾರ್ಡನ್ನ ಸಮುದಾಯ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಮಾಜಿ ಶಾಸಕಿ ಸೀಮಾ ಮಸೂತಿ ಉದ್ಘಾಟಿಸುವರು ಎಂದರು.

‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಪಾಲಿಕೆ ಸದಸ್ಯರಾದ ರತ್ನಾಬಾಯಿ ನಾಝರೆ, ಬಿಜೆಪಿ ಮುಖಂಡ ಹೇಮಂತಕುಮಾರ್ ನೀಲಣ್ಣವರ, ಪುಷ್ಪ ನವಲಗುಂದ, ಸೀಮಾ ಸಾಣಿಕೊಪ್ಪ, ಕಲಾವಿದ ಪ್ರಕಾಶ್ ಮಲ್ಲಿಗವಾಡ ನೃತ್ಯ ನಿರ್ದೇಶಕ ಪ್ರಕಾಶ್ ಕ್ಷತ್ರಿಯ ಪಾಲ್ಗೊಳ್ಳುವರು. ಪಾಲಿಕೆ ಸದಸ್ಯ ಶಂಕರ ಶೇಳಕೆ ಅಧ್ಯಕ್ಷತೆ ವಹಿಸುವರು’ ಎಂದು ಹೇಳಿದರು.

ನಾಟ್ಯಭೈರವಿ ಕಲಾ ಅಕಾಡೆಮಿ ಅಧ್ಯಕ್ಷ ಮಾತನಾಡಿ, ನೃತ್ಯ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ ₹5 ಸಾವಿರ, ದ್ವಿತೀಯ ₹3.500, ತೃತೀಯ ₹2500 ನಗದು ಬಹುಮಾನ ನೀಡಲಾಗುವುದು. ಮಾಹಿತಿಗೆ ಮೊ:8722282346, 9035242165 ಸಂಪರ್ಕಿಸಬಹುದು ಎಂದು ತಿಳಿಸಿದರು. ಪ್ರಕಾಶ ಕ್ಷತ್ರೀಯ, ಉಮೇಶ ಬಾಬರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-24-739121702

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.