ಗದಗ: ‘ನಮ್ಮ ದೇಶದ ಸಂಸ್ಕೃತಿ ಮತ್ತು ಪರಂಪರೆಯ ಕಲಾ ಕಾರ್ಯಕ್ರಮಗಳು ನಶಿಸಿಹೋಗುತ್ತಿರುವ ಈ ಸಂದರ್ಭದಲ್ಲಿ, ಈ ರೀತಿಯ ಸಂಗೀತ, ನೃತ್ಯ ಕಾರ್ಯಕ್ರಮಗಳು ಅವುಗಳಿಗೆ ಪುನರ್ಜನ್ಮ ನೀಡುತ್ತವೆ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹೇಳಿದರು.

ನಗರದ ಪಂಡಿತ್ ಭೀಮಸೇನ ಜೋಶಿ ರಂಗಮಂದಿರದಲ್ಲಿ ಶ್ರದ್ಧಾ ಸ್ವರ ಸಂಗೀತ ವೆಲ್ಫೇರ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ನಾಲ್ಕನೇ ವರ್ಷದ ಸಂಗೀತ, ನೃತ್ಯ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ಥಳೀಯ ಕಲೆ, ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕಾಗಿದೆ. ಇದಕ್ಕೆ ಯುವಕರು ಕೈಜೋಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಮಾತನಾಡಿ, ‘ಸಂಸ್ಥೆಯ ಮಕ್ಕಳು ಉತ್ತಮ ಗಾಯಕರಾಗಿ ಬೆಳೆದು, ಸಂಗೀತ ಹಾಗೂ ಕಲಾತ್ಮಕ ಚಟುವಟಿಕೆಗಳಲ್ಲಿ ಮುಂದುವರಿಯಲಿ’ ಎಂದು ಆಶಿಸಿದರು.

ಸಮಾಜ ಸೇವಕಿ ರೇಣುಕಾ ಪಾಟೀಲ ಮಾತನಾಡಿ, ಉಸಿರು ಫೌಂಡೇಶನ್ ಸದಾ ನಿಮ್ಮ ಸಂಸ್ಥೆಯು ಕೈಗೊಳ್ಳುವ ಚಟುವಟಿಕೆಗಳಿಗೆ ಕೈ ಜೋಡಿಸಲಿದೆ ಎಂದು ಹೇಳಿದರು.

ಸಾಹಿತಿ ನಿಂಗೂ ಸೊಲಗಿ ಮಾತನಾಡಿ, ಸಂಗೀತ ಮತ್ತು ನೃತ್ಯ ಕಾರ್ಯಕ್ರಮವು ಮಕ್ಕಳ ಪ್ರತಿಭೆ ಗುರುತಿಸಲು ಉತ್ತಮ ವೇದಿಕೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇಮಾಮಸಾಬ ಮೊರಬದ ಹಾಗೂ ಮಾಬುಸಾಬ ಸಿದ್ದಿ, ಎಂ.ಎಸ್.ಚಿನ್ನೂರ ಮಾತನಾಡಿದರು. ವಸಂತ ಹಲಗಿ ಮತ್ತು ರಾಜು ಕರಣ ನಿರೂಪಣೆ ಮಾಡಿದರು. ಸಂಸ್ಥೆಯ ಅಧ್ಯಕ್ಷೆ ಜ್ಯೋತಿ ಉಜ್ವಲ್ ಕಬಾಡಿ ಇದ್ದರು.

ಸಭಾ ಕಾರ್ಯಕ್ರಮದ ನಂತರ ಸಂಸ್ಥೆಯ ಮಕ್ಕಳಿಂದ ಸಂಗೀತ ಹಾಗೂ ಸಂತೋಷ ಅಸುಂಡಿ ಅವರ ನಿರ್ದೇಶನದಲ್ಲಿ ನೃತ್ಯ ಪ್ರದರ್ಶನಗಳು ನಡೆದವು. ಅಯ್ಯಪ್ಪ ಸ್ವಾಮಿಯ ಜೀವನಚರಿತ್ರೆಯ ಕುರಿತ ವಿಷಯಾಧಾರಿತ ನೃತ್ಯ ಎಲ್ಲರ ಮನಸೆಳೆಯಿತು.

ಭರತನಾಟ್ಯ ಶಿಕ್ಷಕಿ ವರ್ಷಾ ಕಲಕಂಬಿ ಅವರ ನೇತೃತ್ವದಲ್ಲಿ ನಡೆದ ಯಕ್ಷಗಾನ ಪ್ರದರ್ಶನದಲ್ಲಿ ಶ್ರದ್ಧಾ ಕಬಾಡಿ ಹಾಗೂ ವರ್ಷಾ ಕಲಕಂಬಿ ಅದ್ಭುತ ಪ್ರದರ್ಶನ ನೀಡಿ ಪ್ರೇಕ್ಷಕರಲ್ಲಿ ಅಚ್ಚರಿ ಮೂಡಿಸಿದರು.

ಅತಿಥಿ ಗಾಯಕರಾಗಿ ಹಿಂದೂಸ್ತಾನಿ ಸಂಗೀತ ಗಾಯಕ ರಾಮು ಕೊಡೇಕಲ್ ರಾಗ ಮುಲ್ತಾನಿ ಹಾಗೂ ನಿಂಗರಾಜ ಎಲಿಗಾರ ರಾಗ ಗಾವತಿ ಹಾಡಿ ಕಾರ್ಯಕ್ರಮಕ್ಕೆ ವಿಶೇಷ ಕಳೆ ತಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-23-2117344943

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.