ಹಾಸನ: ರಾಷ್ಟ್ರಭಕ್ತಿ ಗೀತೆಗಳಿಗೆ ಶಾಸ್ತ್ರೀಯ ನೃತ್ಯ ರೂಪದಲ್ಲಿ ಏಕಕಾಲದಲ್ಲಿ ನೂರಾರು ಕಲಾವಿದರು ಹೆಜ್ಜೆ ಹಾಕುವ ಮೂಲಕ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ನಲ್ಲಿ ವಿಶ್ವದಾಖಲೆ ನಿರ್ಮಿಸಲು ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ಸಜ್ಜಾಗಿದೆ ಎಂದು ಅಕಾಡೆಮಿಯ ಕಾರ್ಯದರ್ಶಿ ಡಾ. ಸ್ವಾತಿ ಪಿ. ಭಾರದ್ವಾಜ್ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಕಾಡೆಮಿಯಿಂದ ಮೇ 31ರಂದು ಸಂಜೆ 4 ಗಂಟೆಗೆ ಬೆಂಗ ಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಸ್ಟೇಡಿಯಂನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಇಲ್ಲಿ 300ಕ್ಕೂ ಹೆಚ್ಚು ನೃತ್ಯ ಕಲಾವಿದರು ಏಕಕಾಲದಲ್ಲಿ ದೇಶಭಕ್ತಿ ಗೀತೆಗಳಿಗೆ ಶಾಸ್ತ್ರೀಯ ನೃತ್ಯ ಪ್ರದರ್ಶನ ನೀಡಲಿದ್ದು, ಲಾರ್ಜೆಸ್ಟ್ ನಂಬರ್ ಆಫ್ ಪಾರ್ಟಿಸಿಪೆಂಟ್ಸ್ ಪರಫಾರ್ಮಿಂಗ್ ಪೇಟ್ರಿಯಾಟಿಕ್ ಸಾಂಗ್ಸ್ ಇನ್ ಕ್ಲಾಸಿಕಲ್ ಡ್ಯಾನ್ಸ್ ಫಾರ್ಮ್ ವಿಭಾಗದಲ್ಲಿ ವಿಶ್ವದಾಖಲೆ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.

ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಆಶೀರ್ವಾದದೊಂದಿಗೆ ನಡೆಯುವ ಕಾರ್ಯಕ್ರಮವನ್ನು ವಿದ್ವಾನ್ ಶ್ರೀಶಾನಂದ ಉದ್ಘಾಟಿಸಲಿದ್ದಾರೆ. ಈಗಾಗಲೇ ಮಂತ್ರಾಲಯದಲ್ಲಿ ಏಕಕಾಲದಲ್ಲಿ 300 ನೃತ್ಯ ಕಲಾವಿದರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ನಾಮ ರಾಮಾಯಣ ಗೀತೆಗೆ ನೃತ್ಯ ಪ್ರದರ್ಶನ ನೀಡುವ ಮೂಲಕ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಸಾಧನೆ ಸೇರಿದಂತೆ ಹಲವು ದಾಖಲೆಗಳನ್ನು ಅಕಾಡೆಮಿ ನಿರ್ಮಿಸಿದೆ ಎಂದರು.

ಚನ್ನರಾಯಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ, ರಾಜ್ಯ ಹಾಗೂ ದೇಶದ ಸಾಂಸ್ಕೃತಿಕ ಹಿರಿಮೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಕಾರ್ಯ ಮಾಡುತ್ತಿದೆ ಎಂದರು. ಅಕಾಡೆಮಿ ಅಧ್ಯಕ್ಷೆ ಅನಿತಾ ಪ್ರಕಾಶ್, ಸಂಚಾಲಕ ಪ್ರಕಾಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-36-404817032

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.