ಮಂಗಳೂರು: ‘ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಅಭ್ಯಾಸದಿಂದ ಸಂಸ್ಕಾರ, ಸಂಸ್ಕೃತಿ ಮತ್ತು ಪೌರಾಣಿಕ ಪ್ರಜ್ಞೆ ಮೂಡಲು ಸಾಧ್ಯ. ಪೋಷಕರು ತಮ್ಮ ಮಕ್ಕಳಿಗೆ ಸಂಗೀತ ಮತ್ತು ನೃತ್ಯ ದ ಅಭಿರುಚಿ ಬೆಳೆಸಬೇಕು’ ಎಂದು ಮಂಗಳೂರಿನ ಸನಾತನ ನಾಟ್ಯಾಲಯದ ನಿರ್ದೇಶಕ ಚಂದ್ರಶೇಖರ ಶೆಟ್ಟಿ ನುಡಿದರು.

ಮಣಿ ಕೃಷ್ಣಸ್ವಾಮಿ ಅಕಾಡೆಮಿಯು ಸುರತ್ಕಲ್ನ ನಾಗರಿಕ ಸಲಹಾ ಸಮಿತಿ ಸಹಯೋಗದಲ್ಲಿ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಮತ್ತು ನೃತ್ಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು ಯುವ ಕಲಾವಿದರಿಗೆ ಶುಭ ಕೋರಿ ದರು. ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ ಮಾತನಾಡಿ, ‘ಅವಿಭಜಿತ ದಕ್ಷಿಣ ಕನ್ನಡದ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯಿತ್ತಿರುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ಕಲ್ಪಿಸಿಕೊಡ ಬೇಕು’ ಎಂದು ಅಗ್ರಹಿಸಿದರು.

ವಿದುಷಿ ಶಾರದಾ ಮಣಿ ಶೇಖರ್, ವಿದ್ವಾನ್ ಚಂದ್ರಶೇಖರ ನಾವಡ, ಸಂಗೀತ ಪರಿಷತ್ ಅಧ್ಯಕ್ಷ ಸುಬ್ರಹ್ಮಣ್ಯ ರಾವ್, ಉಡುಪಿ ರಾಗ ಧನ ಸಂಸ್ಥೆಯ ಅರವಿಂದ ಹೆಬ್ಬಾರ್, ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣ ಮೂರ್ತಿ, ವಿಭು ರಾವ್ ಇದ್ದರು.

ಸುಮೇಧ ರಾವ್ ಉಡುಪಿ ಸಂಗೀತ ಕಛೇರಿ ನಡೆಸಿ ಕೊಟ್ಟರು. ಶ್ರೀರಾಗ್ ಪಿ. ರಾವ್ ಉಡುಪಿ ವಯಲಿನ್ ನಲ್ಲಿ ಹಾಗೂ ಪ್ರಜ್ಞಾನ್ ನಾಯಕ್ ಉಡುಪಿ ಮೃದಂಗ ದಲ್ಲಿ ಸಹಕರಿಸಿದರು. ಸಿಂಚನ ಎಸ್. ಕುಲಾಲ್ ಅವರಿಂದ ಏಕಾವ್ಯಕ್ತಿ ಭರತ ನಾಟ್ಯ ಪ್ರದರ್ಶನ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-29-1706635655

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.