ಸಿದ್ದಾಪುರ: ಅನ್ನ, ನೀರಿನಂತೆ ಕಲೆಯೂ ಮನುಷ್ಯನಿಗೆ ಅವಶ್ಯಕ. ಕಲೆಯು ನಮ್ಮ ಮನಸ್ಸಿಗೆ ಆನಂದವನ್ನು ನೀಡುವುದಲ್ಲದೆ ಸಂಸ್ಕಾರವನ್ನೂ ನೀಡುತ್ತದೆ ಎಂದು ಸಾಹಿತಿ ತಮ್ಮಣ್ಣ ಬೀಗಾರ ಹೇಳಿದರು.

ತಾಲ್ಲೂಕಿನ ಬಿದ್ರಕಾನ್ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಸ್ಥಳೀಯ ಕಲಾಭಾಸ್ಕರ ಸಂಸ್ಥೆ ಸಂಸ್ಕೃತಿ ಸಚಿವಾಲಯದ ಯೋಜನೆಯಡಿಯಲ್ಲಿ ಗುರುವಾರ ಹಮ್ಮಿಕೊಂಡ ‘ನವರಸ ಯಕ್ಷೋತ್ಸವ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆ.ಸಿ.ಸಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತ್ರಿ ಬಿಳಗಿ ಮಾತನಾಡಿ, ಜಾಗತೀಕರಣ ಎನ್ನುವುದು ನಮ್ಮ ಬದುಕಿನ ಎಲ್ಲ ಕ್ಷೇತ್ರಗಳ ಮೇಲೂ ಪರಿಣಾಮ ಆಗಿದೆ. ಕೆಡುಕುಗಳನ್ನು ಬದಿಗಿರಿಸಿ, ಒಳಿಯದನ್ನು ಪಡೆಯುತ್ತ ಮುನ್ನಡೆಯ ಬೇಕಾದ ಅನಿವಾರ್ಯತೆ ಇದೆ ಎಂದರು.

ಸೇ.ಸ.ಸಂಘ ಬಿದ್ರಕಾನ್ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಭಟ್ಟ ಚಟ್ನಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಿದ್ರಕಾನ್ ಗ್ರಾ.ಪಂ ಅಭಿವೃದ್ಧಿ ಅಧಿಕಾರ ಸುಬ್ರಹ್ಮಣ್ಯ ಹೆಗಡೆ, ಎಸ್.ಡಿ.ಎಮ್.ಸಿ ಅಧ್ಯಕ್ಷ ವೆಂಕಟರಮಣ ಹೆಗಡೆ ಭಾಗವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ವಿನಾಯಕ ಹೆಗಡೆ ಕವಲಕೊಪ್ಪ ಸ್ವಾಗತಿಸಿದರು. ನಂತರ ಕವಿ ಇಟಗಿ ಮಹಾಬಲೇಶ್ವರ ಭಟ್ಟ ವಿರಚಿತ ‘ಗೋ ಮಹಿಮೆ’ ಎಂಬ ಪೌರಾಣಿಕ ಯಕ್ಷಗಾನ ಮತ್ತು ಕವಿ ಮಾಲೆಕೊಡ್ಲು ಶಂಭು ಭಟ್ಟ ವಿರಚಿತ ‘ಚಂದ್ರಹಾಸ ಚರಿತ್ರೆ’ ಯಕ್ಷಗಾನ ಪ್ರದರ್ಶನ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-20-1991432244

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.