ಸಿದ್ದಾಪುರ: ‘ಇಂದಿನ ಪಾಶ್ಚಾತ್ಯ ಸಂಸ್ಕೃತಿಯ ಸೆಳೆತದ ನಡುವೆಯೂ ಗ್ರಾಮೀಣ ಭಾಗದಲ್ಲಿ ನಮ್ಮ ಸಂಸ್ಕೃತಿ, ಸಂಸ್ಕಾರ ಉಳಿದಿದೆ ಎಂದರೆ ಅದಕ್ಕೆ ಮೂಲ ಕಾರಣ ಯಕ್ಷಗಾನ. ಯಕ್ಷಗಾನದ ಮಹತ್ವವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದು ಶಿಕ್ಷಣ ಪ್ರಸಾರಕ ಸಮಿತಿ ಅಧ್ಯಕ್ಷ ಶಶಿಭೂಷಣ ಹೆಗಡೆ ದೊಡ್ಮನೆ ಹೇಳಿದರು.

ತಾಲ್ಲೂಕಿನ ಹಾರ್ಸಿಕಟ್ಟಾ ಸಮೀಪದ ಹೊಸಗದ್ದೆಯ ಸರಸ್ವತಿ ನಿಲಯದ ಅಂಗಳದಲ್ಲಿ ಸರಸ್ವತಿ ಕಲಾ ಟ್ರಸ್ಟ್ನ 5ನೇ ವಾರ್ಷಿಕೋತ್ಸವ, ಗೌರವ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನವನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಗೋಡೆ ನಾರಾಯಣ ಹೆಗಡೆ ಮಾತನಾಡಿ, ‘ಮಾನವವನ ಬದುಕನ್ನು ಕಲಾಪ್ರಕಾರಗಳು ಹಸನಾಗಿಸುತ್ತದೆ. ಅದರಲ್ಲಿಯೂ ಯಕ್ಷಗಾನ ನಾವು ಹೇಗೆ ಜೀವನ ನಡೆಸಬೇಕು ಎನ್ನುವುದನ್ನು ತಿಳಿಸಿಕೊಡುತ್ತದೆ. ಇಂತಹ ಕಲಾ ಪ್ರಕಾರಗಳಿಗೆ ಹೆಚ್ಚು ಪ್ರೋತ್ಸಾಹ ದೊರಕಬೇಕಾಗಿದೆ’ ಎಂದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಹಾಗೂ ಹಿರಿಯ ಯಕ್ಷಗಾನ ಭಾಗವತ ಮಂಜುನಾಥ ಪರಮೇಶ್ವರ ಹೆಗಡೆ ಉಲ್ಲಾಳಗದ್ದೆ ಅವರಿಗೆ ಗೌರವ ಸನ್ಮಾನ ಹಾಗೂ ಉದಯೋನ್ಮುಖ ಕಲಾವಿದ ಶ್ರೀವತ್ಸ ಹೆಗಡೆ ಗುಡ್ಡೆದಿಂಬ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಆರ್.ಎಂ.ಹೆಗಡೆ ಬಾಳೇಸರ ಮಾತನಾಡಿದರು.

ಗೌರವ ಸ್ವೀಕರಿಸಿದ ಮಂಜುನಾಥ ಪರಮೇಶ್ವರ ಹೆಗಡೆ ಉಲ್ಲಾಳಗದ್ದೆ, ಉದ್ಯಮಿ ಅನಂತಮೂರ್ತಿ ಹೆಗಡೆ ಶಿರಸಿ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತ್ರಿ ಬಿಳಗಿ, ಪತ್ರಕರ್ತ ನಾಗರಾಜ ಭಟ್ಟ ಕೆಕ್ಕಾರ, ಪತ್ರಕರ್ತ ನಾಗರಾಜ ಹೆಗಡೆ ಮತ್ತಿಗಾರ ಮಾತನಾಡಿದರು.

ಅನಂತ ಹೆಗಡೆ ಹೊಸಗದ್ದೆ ಸ್ವಾಗತಿಸಿದರು. ಪಿ.ವಿ.ಹೆಗಡೆ ಹೊಸಗದ್ದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವೀಣಾ ಪ್ರಶಾಂತ ಹಾಗೂ ಉಮಾ ಹೆಗಡೆ ಸನ್ಮಾನ ಪತ್ರ ವಾಚಿಸಿದರು. ಭುವನೇಶ್ವರಿ ಹೆಗಡೆ, ಪ್ರವೀಣ ಹೆಗಡೆ, ಪ್ರಸನ್ನ ಹೆಗಡೆ, ರೂಪಾ ಹೆಗಡೆ, ಅಶ್ವಿನಿ ಹೆಗಡೆ ಸಹಕರಿಸಿದರು.ರಮೇಶ ಹೆಗಡೆ ಹಾರ್ಸಿಮನೆ ನಿರ್ವಹಿಸಿದರು.

ನಂತರ ಸರಸ್ವತಿ ಕಲಾಟ್ರಸ್ಟ್ ಸಂಸ್ಥೆಯ ಮಕ್ಕಳಿಂದ ಕೃಷ್ಣಾರ್ಜುನ ಕಾಳಗ ಮತ್ತು ಆಯ್ದ ಕಲಾವಿದರಿಂದ ಶರಸೇತುಬಂಧನ ಯಕ್ಷಗಾನ ಪ್ರದರ್ಶನಗೊಂಡಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-20-609037330

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.