ಉಡುಪಿ: ಪರ್ಕಳದ ಮಂಗಳ ಕಲಾ ಸಾಹಿತ್ಯ ವೇದಿಕೆಯ 23ನೇ ವರ್ಷದ ಸಂಭ್ರಮ ಕಲಾ ಕೌಸ್ತುಭ ಕಾರ್ಯಕ್ರಮ ಭಾನುವಾರ ಪರ್ಕಳದ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು.

ಭಾಗವತ ಗಣೇಶ್ ಆಚಾರ್ಯ ಬಿಲ್ಲಾಡಿ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆಯ ಅಧ್ಯಕ್ಷ ನಟರಾಜ ಪರ್ಕಳ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ಆಕಾಶವಾಣಿಯ ನಿವೃತ್ತ ಸಹಾಯಕ ನಿರ್ದೇಶಕಿ ಮಾಲತಿ ಆರ್. ಭಟ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಮಣ್ಯ ಜಿ . ಭಟ್ ಕುರ್ಯ, ಶಿಕ್ಷಕಿ ವಂದನಾ ರೈ ಕಾರ್ಕಳ, ಶಿಕ್ಷಕಿ ಸಂಧ್ಯಾ ಕಾಮತ್ ಪಾಲ್ಗೊಂಡಿದ್ದರು.

ಭವನ ಪ್ರಸಾದ್ ಹೆಗ್ಡೆ ಮಣಿಪಾಲ ಉಪಸ್ಥಿತರಿದ್ದರು. ವೇದಿಕೆ ಸಂಚಾಲಕ ಮಂಜುನಾಥ ಉಪಾಧ್ಯ ಪ್ರಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷ ನಟರಾಜ್ ಪರ್ಕಳ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಛಾಯಾಗ್ರಾಹಕ ನಿಧೀಶ್ ಪರ್ಕಳ ಹಾಗೂ ಗಣಪತಿ ವಿಗ್ರಹ ತಯಾರಕ ದೇವರಾಜ್ ನಾಯಕ್ ಸಣ್ಣಕ್ಕಿಬೆಟ್ಟು ಅವರನ್ನು ಸನ್ಮಾನಿಸಲಾಯಿತು. ಅಶೋಕ್ ಸಣ್ಣಕ್ಕಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

ಶ್ರೀನಿವಾಸ್ ನಾಯಕ್ ಚಕ್ರತೀರ್ಥ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ನಾಟ್ಯ ತಂಡ ಮರ್ಣೆ ಕಲಾವಿದರಿಂದ ದೀಕ್ಷಾ ಗುಂಡುಪಾದೆ ನಿರ್ದೇಶನದಲ್ಲಿ ‘ಧರೆಗಿಳಿದ ಜಗನ್ಮಾತೆ’ ನೃತ್ಯರೂಪಕ ಹಾಗೂ ಡೆನ್ನಾನ ಕಲಾವಿದರು ಕಾರ್ಕಳ ಅವರಿಂದ ‘ಡೆನ್ನಾನ’ ನಾಟಕ ಪ್ರದರ್ಶನಗೊಂಡಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-28-1687126085

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.