ಉಡುಪಿ: ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ ಭೀಮ ಗೋಲ್ಡ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಭೀಮ ಯಕ್ಷಶಿಕ್ಷಣ ಸನಿವಾಸ ಶಿಬಿರದ ಸಮಾರೋಪ ಸಮಾರಂಭ ಇದೇ 14ರಂದು ನಡೆಯಲಿದೆ.

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಲಿರುವ ಸಮಾರಂಭದಲ್ಲಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಪ್ರಮಾಣಪತ್ರ ವಿತರಿಸಲಿದ್ದಾರೆ. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಪಿ. ವಾಸುದೇವ ಐತಾಳ್, ಜಯ ಸಿ. ಕೋಟ್ಯಾನ್ ಮೊದಲಾದವರು ಪಾಲ್ಗೊಳ್ಳುವರು.

ಅಂದು ಮಧ್ಯಾಹ್ನ 3 ರಿಂದ 4ರ ವರೆಗೆ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರಾತ್ಯಕ್ಷಿಕೆ ಹಾಗೂ 4 ರಿಂದ ಸಭಾ ಕಾರ್ಯಕ್ರಮ ಜರಗಲಿದೆ ಎಂದು ಯಕ್ಷಶಿಕ್ಷಣ ಟ್ರಸ್ಟ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-28-1796567168

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.