ಬೆಂಗಳೂರು: ಪಂಡಿತ್ ನಂದಕುಮಾರ್ ಕುರುಡಿ ಅಮೃತ ಮಹೋತ್ಸವ ಸಮಿತಿ ನೀಡುವ ‘ಲಯ ಸಾರ್ವಭೌಮ ಪ್ರಶಸ್ತಿ’ಗೆ ತಬಲಾ ವಾದಕ ರವೀಂದ್ರ ಯಾವಗಲ್ ಆಯ್ಕೆಯಾಗಿದ್ದಾರೆ.

ಹಿಂದೂಸ್ತಾನಿ ಗಾಯಕ ನಂದಕುಮಾರ್ ಕುರುಡಿ ಅವರ 75ನೇ ಜನ್ಮದಿನೋತ್ಸವದ ಅಂಗವಾಗಿ ಸಮಿತಿಯು ಇದೇ 15ರಂದು ಸಂಜೆ 5 ಗಂಟೆಗೆ ಜಯನಗರದ 8ನೇ ಬ್ಲಾಕ್ನಲ್ಲಿರುವ ಜಯರಾಮ ಸೇವಾ ಮಂಡಳಿಯಲ್ಲಿ ನಾದಾಮೃತ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಸಂಗೀತ ಸಂಭ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ತಬಲಾ ವಾದಕರಾದ ಸತೀಶ್ ಹಂಪಿಹೊಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಪ್ತಕ ಸಂಸ್ಥೆಯ ಸಂಸ್ಥಾಪಕ ಜಿ.ಎಸ್. ಹೆಗಡೆ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಬಳಿಕ ನಡೆಯುವ ಸಂಗೀತ ಕಛೇರಿಯಲ್ಲಿ ನಂದಕುಮಾರ್ ಕುರುಡಿ ಗಾಯನ ಪ್ರಸ್ತುತಪಡಿಸಲಿದ್ದಾರೆ. ತಬಲಾದಲ್ಲಿ ಎಂ. ನಾಗೇಶ್, ಹಾರ್ಮೋನಿಯಂನಲ್ಲಿ ವ್ಯಾಸಮೂರ್ತಿ ಕಟ್ಟಿ ಸಾಥ್ ನೀಡಲಿದ್ದಾರೆ. ರವೀಂದ್ರ ಯಾವಗಲ್ ಅವರಿಂದ ತಬಲಾ ಹಾಗೂ ರಂಜನ್ ಕುಮಾರ್ ಬೇವೂರ್ ಅವರಿಂದ ಪಿಟೀಲು ವಾದನ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-4-180809387

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.