ಚಾಮರಾಜನಗರ: ವರನಟ ಡಾ.ರಾಜಕುಮಾರ್ ಅವರ 98ನೇ ಜಯಂತಿ ಹಾಗೂ ಪಾರ್ವತಮ್ಮ ರಾಜಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ಮೈಸೂರಿನ ಡಾ.ರಾಜಕುಮಾರ್ ಮ್ಯೂಸಿಕಲ್ ಗ್ರೂಪ್ ವತಿಯಿಂದ ಮೇ 31ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗ್ರೂಪ್ ಸಂಸ್ಥಾಪಕ ಅಧ್ಯಕ್ಷ ಮೈಸೂರು ಜಯರಾಂ ಹೇಳಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಾರ್ಯಕ್ರಮದಲ್ಲಿ ಡಾ.ರಾಜಕುಮಾರ್ ಅಭಿನಯದ ಆಯ್ದ ಸಿನಿಮಾ ಗೀತೆಗಳನ್ನು ಹಾಡಲಾಗುವುದು. ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ.ಬಾಬುಜಗಜೀವನರಾಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಹೆಚ್.ಹೆಚ್.ನಾಗರಾಜು, ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಲಿಂಗರಾಜು, ಈಶ್ವರಿ ಟ್ರಸ್ಟ್ ಅಧ್ಯಕ್ಷ ಸಿ.ಎಂ.ವೆಂಕಟೇಶ್, ಮುಖಂಡರಾದ ಚಾ.ಗು.ನಾಗರಾಜು, ಶಿವಕುಮಾರ್ ರಾಮಸಮುದ್ರ, ಡಾ.ಬಾಬುಜಗಜೀವನರಾಂ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಶಿವಕುಮಾರ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಯರಾಂ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಶಿವಕುಮಾರ್ ರಾಮಸಮುದ್ರ, ಎಂ.ಶಿವಕುಮಾರ್, ಟಿವಿಎಸ್ ಕುಮಾರ್, ದೊರೆರಾಜು ಆಲೂರು, ನಾಗೇಂದ್ರ ಯಳಂದೂರು, ಲಿಂಗರಾಜು, ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-37-787019208

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.