ಧಾರವಾಡ: ಧಾರವಾಡವು ಸಂಗೀತ, ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯ ತವರೂರಾಗಿದ್ದು, ಇಲ್ಲಿನ ಕಲಾ ಪರಂಪರೆಗೆ ನಿರಂತರ ಪ್ರೋತ್ಸಾಹದ ಅಗತ್ಯವಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರೇರಿತ `ಹುಬ್ಬಳ್ಳಿ ಧಾರವಾಡ ರಾಷ್ಟ್ರೀಯ ಸಂಗೀತೋತ್ಸವ'ದ ಅಂಗವಾಗಿ ಸತ್ತೂರಿನ ಡಿ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ `ವಸಂತ ಗಾನಲಹರಿ' ಸಂಗೀತ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಪ್ರತಿದಿನ ಸಂಗೀತ ಕೇಳುವುದರಿಂದ ನಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು. ಸಂಗೀತ ಕೇಳುವುದರಿಂದ ದೇಹದಲ್ಲಿ ಚೈತನ್ಯ ಹೆಚ್ಚುತ್ತದೆ. ಇಂದು ನಮ್ಮ ಬದುಕು ಹಲವು ತಲ್ಲಣಗಳಿಂದ ಕೂಡಿದೆ. ಒತ್ತಡಗಳು ದೇಹದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಸಂಗೀತ, ಧ್ಯಾನ, ಯೋಗ ಅಭ್ಯಾಸ ರೂಢಿಸಿಕೊಂಡರೆ ನೆಮ್ಮದಿಯಿಂದ ಇರಬಹುದು’ ಎಂದರು.

‘ಇಂದಿನ ಆಧುನಿಕ ಯುಗದಲ್ಲಿ ಮೊಬೈಲ್ ಫೋನ್ಗಳ ಅತಿಯಾದ ಬಳಕೆಯು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತವೆ. ನೆಮ್ಮದಿಯ ಜೀವನಕ್ಕಾಗಿ ಕಲೆಗಳ ಕಡೆಗೆ ಗಮನ ಹರಿಸಬೇಕು’ ಎಂದು ಸಲಹೆ ನೀಡಿದರು.

ಶಾಸಕರಾದ ಅರವಿಂದ ಬೆಲ್ಲದ, ಎಂ.ಆರ್.ಪಾಟೀಲ, ಕಲಾ ಪೋಷಕ ಗೋವಿಂದ ಜೋಶಿ, ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ ಚವಾಣ್, ಶಿವು ಹಿರೇಮಠ, ಸಂಜಯ ಕಪಟಕರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-24-117522026

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.