ಕಾಳಗಿ: ‘ಕನ್ನಡದ ಶ್ರೀಮಂತ ಸಾಹಿತ್ಯ ಎನಿಸಿರುವ ವಚನ ಸಾಹಿತ್ಯಕ್ಕೆ ಸಂಗೀತ ಸಂಯೋಜನೆ ಮಾಡಿ ವೇದಿಕೆಗಳಲ್ಲಿ ಹಾಡುವ ಪರಂಪರೆ ಆರಂಭಿಸಿದ ಹಿರಿಮೆ ಪಂಚಾಕ್ಷರ ಗವಾಯಿಗಳಿಗೆ ಸಲ್ಲುತ್ತದೆ’ ಎಂದು ಕೋಡ್ಲಿ ಹಿರೇಮಠದ ಪೀಠಾಧಿಪತಿ ಬಸವಲಿಂಗ ಶಿವಾಚಾರ್ಯ ಹೇಳಿದರು.

ತಾಲ್ಲೂಕಿನ ಕೋಡ್ಲಿ ಗ್ರಾಮದ ರೇವಣಸಿದ್ದೇಶ್ವರ ಹಿರೇಮಠದಲ್ಲಿ ಚಿಂಚೋಳಿಯ ಗಾನಯೋಗಿ ಡಾ.ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಸೇವಾ ಸಂಘ ಹಾಗೂ ಪಂಚಾಕ್ಷರ ಘರಾನಾ ಸಾಂಸ್ಕೃತಿಕೋತ್ಸವದಲ್ಲಿ ಅವರು ಮಾತನಾಡಿದರು.

ಸಂಗೀತ ಕಲಾವಿದ ರೇವಣಸಿದ್ದಯ್ಯ ಹಿರೇಮಠ, ಪತ್ರಕರ್ತ ಜಗನ್ನಾಥ ಶೇರಿಕಾರ ಮಾತನಾಡಿದರು.

ಜಿಪಂ ಮಾಜಿ ಸದಸ್ಯ ರಾಮಲಿಂಗಾರೆಡ್ಡಿ ದೇಶಮುಖ ಕಾರ್ಯಕ್ರಮ ಉದ್ಘಾಟಿಸಿದರು. ಗದಗನ ವಿದ್ವಾನ್ ಸುರೇಶ ಎಸ್. ಮಂಗಳೂರು ಮತ್ತು ಗದಗನ ಕುಮಾರೇಶ್ವರ ಕೃಪಾಪೋಷಿತ ಪಂಚಾಕ್ಷರಿ ಗವಾಯಿಗಳ ಸಂಗೀತ ಪಾಠ ಶಾಲೆಯ ಶಿಕ್ಷಕ ರಾವುತಪ್ಪ ಎಂ. ಹೂಗಾರ ಅವರಿಗೆ ‘ವಿಶ್ವಗಾನ ಉಭಯ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಸವಲಿಂಗ ಶಿವಾಚಾರ್ಯ, ಪ್ರಾಂಶುಪಾಲ ಮಲ್ಲಿಕಾರ್ಜುನ ಪಾಲಾಮೂರ, ಜಗದೀಶ ಮರಪಳ್ಳಿ, ಸಂಗಯ್ಯಸ್ವಾಮಿ ಅಣವಾರ, ಸುರೇಶ ದೇಶಪಾಂಡೆ, ಅಣ್ಣಾರಾವ ಪೆದ್ದಿ, ಮಲ್ಲಿಕಾರ್ಜುನ ಸಪೈಗೋಳ ಸೇರಿದಂತೆ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-31-69214564

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.