ಮೈಸೂರು: ಇಲ್ಲಿನ ರಾಘವೇಂದ್ರ ನಗರದ ಡಾ.ರಾಜಕುಮಾರ್ ಮ್ಯೂಸಿಕಲ್ ಗ್ರೂಪ್ ವತಿಯಿಂದ ಮೇ 10ರಂದು ಸಂಜೆ 5ಕ್ಕೆ ಪುರಭವನದಲ್ಲಿ ವರನಟ ಡಾ.ರಾಜಕುಮಾರ್ ಸವಿ ನೆನಪಿನಲ್ಲಿ ‘ದೊಡ್ಡೋರ ಧ್ವನಿ’ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಮೈಸೂರು ಜಯರಾಂ ತಿಳಿಸಿದರು.

‘ಗಂಗೋತ್ರಿ ಕುಮಾರ್, ನಾಗೇಂದ್ರ, ನಂಜುಂಡಯ್ಯ, ಅಶ್ವಿನಿ, ತೇಜಸ್ವಿನಿ ಹಾಗೂ ನಾನು ಹಾಡುತ್ತೇವೆ. 9 ಮಂದಿ ವಾದ್ಯ ಸಹಕಾರ ನೀಡುವರು. ರಾಜಕುಮಾರ್ ಅವರ ಚಲನಚಿತ್ರಗಳ ಆಯ್ದ ಗೀತೆಗಳನ್ನು ಪ್ರಸ್ತುತಪಡಿಸಲಾಗುವುದು. ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ವಿಜಯನಗರದ ಯೋಗಾನರಸಿಂಹಸ್ವಾಮಿ ದೇವಸ್ಥಾನದ ಭಾಷ್ಯಂ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷ ಆರ್. ರಘು, ಕೆಪಿಸಿಸಿ ಸದಸ್ಯ ಎಚ್.ವಿ. ರಾಜೀವ್, ಮಾಜಿ ಶಾಸಕ ಎಸ್.ಬಾಲರಾಜ್, ಮೈಸೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಜಿ.ಹರೀಶ್, ಕರ್ನಾಟಕ ಸುಗಮ ಸಂಗೀತ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ್ ವಿ.ಭೈರಿ, ಕಲಾಪೋಷಕ ರಘುರಾಂ ವಾಜಪೇಯಿ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಡಾ.ವೈ.ಡಿ. ರಾಜಣ್ಣ ಮೊದಲಾದವರು ಪಾಲ್ಗೊಳ್ಳುವರು’ ಎಂದು ತಿಳಿಸಿದರು.

ಗ್ರೂಪ್ನ ಎಡೆಯೂರು ಸಮೀವುಲ್ಲಾ, ಲತಾ ಬಾಲಕೃಷ್ಣ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-39-307773973

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.