ಮೈಸೂರು: ‘ಡಿಸೆಂಬರ್ನಲ್ಲಿ ಮೈಸೂರು ನಗರದಲ್ಲಿ ಸುಗಮ ಸಂಗೀತ ಶತಮಾನೋತ್ಸವ ಆಚರಿಸಲು ಉದ್ದೇಶಿಸಲಾಗಿದೆ’ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ ಕಾರ್ಯಾಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ ಹೇಳಿದರು.

ನಗರದ ಹೂಟಗಳ್ಳಿ ಕೆಎಚ್ಬಿ ಕಾಲೊನಿಯ ಅನಂತೇಶ್ವರ ಭವನದಲ್ಲಿ ಶನಿವಾರ ಕರ್ನಾಟಕ ಸುಗಮ ಸಂಗೀತ ಪರಿಷತ್ತು ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಎರಡು ದಿನಗಳ ಸುಗಮ ಸಂಗೀತ ಕಲಿಕಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ಶತಮಾನೋತ್ಸವ ಸಮಾರಂಭಕ್ಕೆ ಈಗಾಗಲೇ ರಾಜ್ಯ ಘಟಕದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ₹1 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದರು.

‘ಹತ್ತು ಗೀತೆಗಳನ್ನು ಸಿದ್ಧಪಡಿಸಿ, ರಾಜ್ಯದ 31 ಜಿಲ್ಲೆಗಳಿಗೂ ಸಂಪನ್ಮೂಲ ವ್ಯಕ್ತಿಗಳನ್ನು ಕಳುಹಿಸಿ, ಗಾಯಕ- ಗಾಯಕರನ್ನು ಆಯ್ಕೆ ಮಾಡಲಾಗುವುದು. ಈ ರೀತಿ ಜಿಲ್ಲೆಯಿಂದ ಆಯ್ಕೆಯಾದ ಒಂದು ಸಾವಿರ ಮಂದಿಯನ್ನು ಮೈಸೂರಿಗೆ ಕರೆಸಿ, ಸಾಮೂಹಿಕವಾಗಿ ಗೀತಗಾಯನ ಮಾಡಿಸಲಾಗುವುದು. ಈ ಕಾರ್ಯಕ್ರಮವನ್ನು ಕುವೆಂಪು ಹಾಗೂ ಸಿ.ಅಶ್ವತ್ಥ್ ಅವರಿಗೆ ಸಮರ್ಪಿಸಲಾಗುವುದು’ ಎಂದು ಅವರುತಿಳಿಸಿದರು.

ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿ.ವಿ ಮಾನ್ಯತೆಯೊಂದಿಗೆ ಆರಂಭಿಸಿರುವ ಅನಂತೇಶ್ವರ ಟ್ರಸ್ಟ್ ಸುಗಮ ಸಂಗೀತ ಶಾಲೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ಚಾಲನೆ ನೀಡಿದರು.

ಮುಖ್ಯ ಅತಿಥಿಯಾಗಿದ್ದ ಚಿಂತಕ ಶಂಕರ್ ದೇವನೂರು ಮಾತನಾಡಿದರು. ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ವಿ.ಭೈರಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಉಡುಪ ಭಾವಗೀತೆ ಹಾಡಿದರು.

ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಕವಿ ಜಯಪ್ಪ ಹೊನ್ನಾಳಿ ಮುಖ್ಯ ಅತಿಥಿಗಳಾಗಿದ್ದರು. ಜಿಲ್ಲಾ ಘಟಕದ ನ.ಗಂಗಾಧರಪ್ಪ, ಸಿರಿಬಾಲು, ಶಿಬಿರದ ಸಂಚಾಲಕರಾದ ಗೀತಲಕ್ಷ್ಮಿ ಕಿಣಿ, ಸುಜಾತಾ ಜಯಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-39-1517013328

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.