ಪಡುಬಿದ್ರಿ: ‘ಏಕಕಾಲದಲ್ಲಿ ಹಲವಾರು ಜನ ಮಾತನಾಡುವ ಸಂಗೀತ ಕ್ಷೇತ್ರಕ್ಕೆ ಜಗಳಕ್ಕೂ ಇತಿಶ್ರೀ ಹಾಡುವ ಸಾಮರ್ಥ್ಯವಿದೆ. ಸಂಗೀತ, ಭಜನೆ ಮನಸ್ಸಿನ ಏಕಾಗ್ರತೆಗೆ ಸಹಕಾರಿಯಾಗಿದೆ. ಅಯೋಧ್ಯೆಯಲ್ಲಿ ನಡೆದ 50 ವರ್ಷದ ಭಜನೆಯ ಫಲವಾಗಿ ರಾಮಮಂದಿರ ನಿರ್ಮಾಣವಾಯಿತು’ ಎಂದು ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದರು.

ಪಲಿಮಾರು ಸಪ್ತಸ್ವರ ಕಲಾಕೇಂದ್ರದ 12ನೇ ವಾರ್ಷಿಕೋತ್ಸವ ಅಂಗವಾಗಿ ಪಲಿಮಾರು ಭುವನೇಂದ್ರತೀರ್ಥ ಸಭಾಭವನದಲ್ಲಿ ಭಾನುವಾರ ಆಯೋಜಿಸಿದ್ದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಆಹ್ವಾನಿತ ತಂಡಗಳ ಭಜನಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.

ಕಿರಿಯ ಯತಿ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ಸಂಗೀತ ಭಗವಂತನಿಗೆ ಖುಷಿ ಕೊಡುವ ವಿಚಾರವಾಗಿದೆ ಎಂದು ಹೇಳಿದರು.

ಸಂಗೀತ ಗುರುಗಳಾದ ಎಂ. ನಾರಾಯಣ, ಪಿ. ರಾಘವ ಭಂಡಾರಿ ಅವರನ್ನು ಸನ್ಮಾನಿಸಲಾಯಿತು. ಕೇಂದ್ರದ ಗುರುಗಳು, ಕಾರ್ಯಕ್ರಮಕ್ಕೆ ಸಹಕರಿಸಿದವರನ್ನು ಗೌರವಿಸಲಾಯಿತು.

ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ್ ಉಡುಪ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮುಖಂಡ ಲಾಲಾಜಿ ಆರ್. ಮೆಂಡನ್, ಅದಾನಿ ಗ್ರೂಪ್ ಕಾರ್ಯ ನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಗುತ್ತಿನಾರ್ ಕೃಷ್ಣ ಶೆಟ್ಟಿ, ಡಾ.ಪ್ರಕಾಶ್ ನಂಬಿಯಾರ್, ಪಲಿಮಾರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಗಾಯತ್ರಿ ಡಿ. ಪ್ರಭು ಭಾಗವಹಿಸಿದ್ದರು. ಸಪ್ತಸ್ವರ ಕಲಾಕೇಂದ್ರದ ಅಧ್ಯಕ್ಷ ಸಂದೀಪ್ ಪಲಿಮಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿಲಾರು ಸುಧಾಕರ್ ಶೆಣೈ ಸ್ವಾಗತಿಸಿದರು. ಕೆ.ವಿ. ರಮಣ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-28-1773864166

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.