ಪಡುಬಿದ್ರಿ: ಇಲ್ಲಿನ ತುಳುನಾಡ ಕಲಾವಿದರು ಸಂಘಟನೆಯ ರಜತ ಸಂಭ್ರಮದ ಪ್ರಯುಕ್ತ, ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಮೇ 9ರಂದು ರಾತ್ರಿ 8 ಗಂಟೆಗೆ ದೇವಸ್ಥಾನದ ಆವರಣದಲ್ಲಿ ‘ತಾಳ ತರಂಗ- 2026’ ಸಂಗೀತ ರಸಸಂಜೆ, ನೃತ್ಯ ವೈಭವ ಕಾರ್ಯಕ್ರಮ ನಡೆಯಲಿದೆ.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ತುಳುನಾಡ ಕಲಾವಿದರು ಅಧ್ಯಕ್ಷ ಸಂತೋಷ್ ಪಡುಬಿದ್ರಿ, ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಉದ್ಘಾಟಿಸುವರು. ಸಂಸ್ಥೆಯು 25 ವರ್ಷಗಳಿಂದ ಗ್ರಾಮೀಣ ಕಲಾ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ, ಕಲಾ ಪ್ರತಿಭೆಗಳನ್ನು ಬೆಳೆಸಿದೆ. ಪ್ರತಿ ವರ್ಷ ಕಲಾ ಕ್ಷೇತ್ರದ ಸಾಧಕರಿಗೆ ‘ತುಳುನಾಡ ಸಿರಿ’ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದು, ಈ ಬಾರಿ 4 ಮಂದಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ. ಸಾಮಾಜಿಕ, ಧಾರ್ಮಿಕ, ಕಲಾ ಹಾಗೂ ಶಿಕ್ಷಣ ಕ್ಷೇತ್ರದ ಸಾಧಕರನ್ನು ಗೌರವಿಸಲಾಗುವುದು. ಓಂಕಾರ್ ಕಲಾಸಂಗಮ ಪಡುಬಿದ್ರಿ ಇವರಿಂದ ನೃತ್ಯ ವೈಭವ ಜರುಗಲಿದೆ ಎಂದರು.

ಸಂಸ್ಥೆಯ ಗೌರವ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಚಂದ್ರಹಾಸ್ ಶೆಟ್ಟಿ ಪೂಲ, ನವೀನ್ಚಂದ್ರ ಜೆ. ಶೆಟ್ಟಿ, ಗಣೇಶ್ ಆಚಾರ್ಯ ಉಚ್ಚಿಲ, ವಿಜಯ ಮೆಂಡನ್, ಅಶೋಕ್ ಸಾಲ್ಯಾನ್ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ರಚನ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಸುಧಾಕರ್ ಕೆ., ಜೊತೆ ಕಾರ್ಯದರ್ಶಿ ದಿನೇಶ್ ಪಡುಬಿದ್ರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-28-1098750989

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.